ಎಸಿಬಿ ಯಿಂದ ಅಹವಾಲು ಸ್ವೀಕಾರ

Spread the love

ಎಸಿಬಿ ಯಿಂದ ಅಹವಾಲು ಸ್ವೀಕಾರ

ಉಡುಪಿ : ಉಡುಪಿ ಭ್ರಷ್ಟಾಚಾರ ನಿಗ್ರಹದಳ ಪೊಲೀಸ್ ಠಾಣೆಯ ಅಧಿಕಾರಿ ಸಿಬ್ಬಂದಿಯವರು ಫೆಬ್ರವರಿ 23 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಬೈಂದೂರು ಪ್ರವಾಸಿ ಮಂದಿರದಲ್ಲಿ, ಮಧ್ಯಾಹ್ನ 2 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಕುಂದಾಪುರ ಪ್ರವಾಸಿ ಮಂದಿರದಲ್ಲಿ, ಫೆಬ್ರವರಿ 25 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕಾಪು ಪುರಸಭಾ ಭವನದಲ್ಲಿ, ಮಧ್ಯಾಹ್ನ 2 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಬ್ರಹ್ಮಾವರ ಪ್ರವಾಸಿ ಮಂದಿರದಲ್ಲಿ ಹಾಗೂ ಫೆಬ್ರವರಿ 27 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕಾರ್ಕಳ ಪ್ರವಾಸಿ ಮಂದಿರದಲ್ಲಿ, ಮಧ್ಯಾಹ್ನ 2 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಹೆಬ್ರಿ ಪ್ರವಾಸಿ ಮಂದಿರದಲ್ಲಿ, ಮೊಕ್ಕಾಂ ಹೂಡಿ ಯಾವುದೇ ಸಾರ್ವಜನಿಕ ನೌಕರರು, ಸಾರ್ವಜನಿಕರಿಗೆ ಸರಕಾರಿ ಕೆಲಸ ನಿರ್ವಹಿಸಿ ಕೊಡಲು ಅನಗತ್ಯ ವಿಳಂಬ, ನಿರ್ಲಕ್ಷ್ಯತೆ ಅಥವಾ ಲಂಚದ ಹಣಕ್ಕೆ ಬೇಡಿಕೆ ಇಟ್ಟಲ್ಲಿ ದೂರು ಸ್ವೀಕರಿಸಲಾಗುವುದು ಎಂದು ಭ್ರಷ್ಟಾಚಾರ ನಿಗ್ರಹದಳದ ಆರಕ್ಷಕ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


Spread the love