ಎಸ್‌ಸಿಐ ಫೌಂಡೇಶನ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Spread the love

ಎಸ್‌ಸಿಐ ಫೌಂಡೇಶನ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

ಮಂಗಳೂರು: ಎಸ್‌ಸಿಐ ಫೌಂಡೇಶನ್ ಆಯೋಜಿಸಿದ್ದ ವಿದ್ಯಾರ್ಥಿವೇತನ ವಿತರಣಾ ಸಮಾರಂಭದಲ್ಲಿ ಪ್ರತಿಷ್ಠಾನದ ಅಧ್ಯಕ್ಷ ಡಾ. ಅರವಿಂದ ರಾವ್ ಕೇದಿಗೆ ಅವರು ಪ್ರತಿಭಾನ್ವಿತ ಮತ್ತು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಸೀನಿಯರ್ ಚೇಂಬರ್ ಇಂಟರ್‌ನ್ಯಾಶನಲ್ ಫೌಂಡೇಶನ್ ವಿದ್ಯಾರ್ಥಿವೇತನವನ್ನು ವಿತರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಫೌಂಡೇಶನ್ ಸ್ಕಾಲರ್‌ಶಿಪ್ ವಿತರಿಸಲಾಯಿತು.ಸೀನಿಯರ್ ಚೇಂಬರ್ ಇಂಟರ್‌ನ್ಯಾಶನಲ್ ಫೌಂಡೇಶನ್ ಇದರ ಸಂಸ್ಥಾಪಕ ಅಧ್ಯಕ್ಷ ಪಿ ಪಿ ಪ್ರೇಮಾನಂದ್ ಅವರ ಹೆಸರಿನಲ್ಲಿ ವೃತ್ತಿಪರ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗಾಗಿ ಸ್ಥಾಪಿಸಿರುವ ವಿದ್ಯಾರ್ಥಿ ನಿಧಿಯಿಂದ ವಿದ್ಯಾರ್ಥಿ ವೇತನದ ಚೆಕ್ ಅನ್ನು ಫೌಂಡೇಶನ್ ಅಧ್ಯಕ್ಷ ಡಾ. ಅರವಿಂದ ರಾವ್ ಕೇದಿಗೆ ಅವರು ಜನವರಿ 7 ರಂದು ನಡೆದ ವಿದ್ಯಾರ್ಥಿವೇತನ ವಿತರಣಾ ಸಮಾರಂಭದಲ್ಲಿ ವಿತರಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ರಾಷ್ಟ್ರೀಯ ಸಂಚಾಲಕ ಜೋಸ್ ಕಂಡೋತ್ ವಹಿಸಿದ್ದರು. ರಾಷ್ಟ್ರೀಯ ಅಧ್ಯಕ್ಷ ವಿ. ಭರತ್ ದಾಸ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ರಾಜೇಶ್ ವೈಭವ್, ಉದಯಭಾನು, ಚಿತ್ರಕುಮಾರ್, ಸಂಪತ್ ಕುಮಾರ್, ಬಿ ಜಯರಾಜನ್, ಡಾ.ಎಂ ಸಿ ಮೋಹನ್, ವರ್ಗೀಸ್ ವೈದ್ಯನ್, ಕೆಪಿಟಿ ಜಲೀಲ್ ಮತ್ತು ನಾಗೇಶ್ ಮತ್ತಿತರರು ಉಪಸ್ಥಿತರಿದ್ದರು.


Spread the love

Leave a Reply

Please enter your comment!
Please enter your name here