ಎಸ್‌ಸಿಡಿಸಿಸಿ ಬ್ಯಾಂಕ್‌ನ ಉಪಾಧ್ಯಕ್ಷರಾಗಿ ಕಿಶನ್‌ ಹೆಗ್ಡೆ ಕೊಳ್ಕೆಬೈಲ್‌

Spread the love

ಎಸ್‌ಸಿಡಿಸಿಸಿ ಬ್ಯಾಂಕ್‌ನ ಉಪಾಧ್ಯಕ್ಷರಾಗಿ ಕಿಶನ್‌ ಹೆಗ್ಡೆ ಕೊಳ್ಕೆಬೈಲ್‌

ಉಡುಪಿ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷರಾಗಿ ಕಿಶನ್‌ ಹೆಗ್ಡೆ ಕೊಳ್ಕೆಬೈಲ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎಸ್‌ಸಿಡಿಸಿಸಿ ಬ್ಯಾಂಕ್‌ನ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನದ ಉಳಿದ ಅವಧಿಗೆ ಚುನಾವಣೆ ನಡೆಯಿತು.

ಮಂಗಳೂರು ಉಪ ವಿಭಾಗದ ಸಹಾಯಕ ಆಯುಕ್ತ ಡಾ.ಅಶೋಕ್‌ ಚುನಾವಣಾಧಿಕಾರಿಯಾಗಿದ್ದರು. ಉಪಾಧ್ಯಕ್ಷರಾಗಿ ಆಯ್ಕೆಯಾದ ಕಿಶನ್‌ ಹೆಗ್ಡೆ ಕೊಳ್ಕೆಬೈಲ್‌ ರನ್ನು ಬ್ಯಾಂಕ್‌ನ ಅಧ್ಯಕ್ಷ‌ ಡಾ.ಎಂ.ಎನ್‌. ರಾಜೇಂದ್ರ ಕುಮಾರ್‌ ಅಭಿನಂದಿಸಿದರು.

kishan-hegde

ಈ ಸಂದರ್ಭದಲ್ಲಿ ಬ್ಯಾಂಕಿನ ನಿರ್ದೇಶಕರಾದ ವಿನಯ ಕುಮಾರ್‌ ಸೂರಿಂಜೆ, ಬಿ. ನಿರಂಜನ್‌, ಟಿ.ಜಿ. ರಾಜರಾಮ್‌ ಭಟ್‌, ಎಂ. ವಾದಿರಾಜ ಶೆಟ್ಟಿ, ಭಾಸ್ಕರ್‌ ಎಸ್‌. ಕೋಟ್ಯಾನ್‌, ಬಿ. ರಘುರಾಮ ಶೆಟ್ಟಿ, ಎಸ್‌. ರಾಜು ಪೂಜಾರಿ, ಕೆ.ಎಸ್‌. ದೇವರಾಜ್‌, ಸದಾಶಿವ ಉಳ್ಳಾಲ್‌, ರಾಜೇಶ್‌ ರಾವ್‌, ಶಶಿಕುಮಾರ್‌ ರೈ, ಎಸ್‌.ಬಿ. ಜಯರಾಮ್‌ ರೈ, ಸಹಕಾರ ಸಂಘಗಳ ಉಪನಿಬಂಧಕರಾದ ಬಿ.ಕೆ. ಸಲೀಂ, ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ. ವಿಶ್ವನಾಥ ನಾಯರ್‌ ಉಪಸ್ಥಿತರಿದ್ದರು.

ಕಿಶನ್ ಹೆಗ್ಡೆ ಕೊಳ್ಕೆಬೈಲ್ ಇವರು ಪ್ರಸ್ತುತ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ.,ಇದರ ಅಧ್ಯಕ್ಷರಾಗಿ, ಉಡುಪಿ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಭಿವೃದ್ದಿ ಬ್ಯಾಂಕಿನ ಅಧ್ಯಕ್ಷರಾಗಿ, ಶಿರಿಯಾರ ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕರಾಗಿ, ನವೋದಯ ವಿವಿದೋಧ್ದೇಶ ಸೌಹಾರ್ಧ ಸಹಕಾರಿ ನಿ., ಮಂಗಳೂರು ಇದರ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.


Spread the love