ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ – : 99.9% ಫಲಿತಾಂಶ

Spread the love

ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ – : 99.9% ಫಲಿತಾಂಶ

ಬೆಂಗಳೂರು: ಕಳೆದ ಜುಲೈನಲ್ಲಿ ನಡೆದ 2020-21ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಸೋಮವಾರ ಪ್ರಕಟವಾಗಿದೆ. ಪರೀಕ್ಷೆ ಬರೆದಿರುವ ಎಲ್ಲರನ್ನೂ ಉತ್ತೀರ್ಣಗೊಳಿಸುವುದಾಗಿ ಸರ್ಕಾರ ಈಗಾಗಲೇ ಘೋಷಿಸಿದ್ದು, ಅಂಕ ಆಧಾರಿತ ಫಲಿತಾಂಶ ಪ್ರಕಟವಾಗಿದೆ.

ಪರೀಕ್ಷೆ ಬರೆದಿರುವ 8.76 ಲಕ್ಷ ವಿದ್ಯಾರ್ಥಿಗಳ ಪೈಕಿ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಿರುವ ಆಧಾರದ ಮೇಲೆ ಪ್ರತಿಯೊಬ್ಬರ ಅಂಕ ಆಧಾರಿತ ಫಲಿತಾಂಶ https://sslc.karnataka.gov.in/, kseeb.kar.nic.in, karresults.nic.in . ನಲ್ಲಿ ಲಭ್ಯವಿದೆ.

470,160 SSLC ವಿದ್ಯಾರ್ಥಿಗಳು ಉತ್ತೀರ್ಣ ಆಗಿದ್ದಾರೆ.4,01,280 ವಿದ್ಯಾರ್ಥಿನಿಯರು ಉತ್ತೀರ್ಣ ಆಗಿದ್ದಾರೆ. A+ ಗ್ರೇಡ್ ಪಡೆದಿರುವ ವಿದ್ಯಾರ್ಥಿಗಳು 1,28,931, A ಗ್ರೇಡ್ ಪಡೆದಿರುವ ವಿದ್ಯಾರ್ಥಿಗಳು 2,50,317, B ಗ್ರೇಡ್ ಪಡೆದಿರುವ ವಿದ್ಯಾರ್ಥಿಗಳು 2,87,594, C ಗ್ರೇಡ್ ಪಡೆದಿರುವ ವಿದ್ಯಾರ್ಥಿಗಳು 1,13,610, ಶೇ. 9ರಷ್ಟು ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ನೀಡಿ ಪಾಸ್ ಮಾಡಲಾಗಿದೆ. c ಗ್ರೇಡ್ ಪಡೆದಿರುವ ಶೇ.9ರಷ್ಟು ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ ನೀಡಲಾಗಿದೆ.

625ಕ್ಕೆ 625 ಅಂಕ ಪಡೆದಿರುವ 157 ವಿದ್ಯಾರ್ಥಿಗಳು, 625ಕ್ಕೆ 623 ಅಂಕ ಪಡೆದಿರುವ 289 ವಿದ್ಯಾರ್ಥಿಗಳು, 625ಕ್ಕೆ 622 ಅಂಕ ಪಡೆದಿರುವ ಇಬ್ಬರು ವಿದ್ಯಾರ್ಥಿಗಳು, 625ಕ್ಕೆ 621 ಅಂಕ ಪಡೆದಿರುವ 449 ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದುಕೊಂಡಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಮೊನ್ನೆಯೇ ಬರಬೇಕಾಗಿತ್ತು. ಕಾರಣಾಂತರಗಳಿಂದ ಇಂದು ಫಲಿತಾಂಶ ಪ್ರಕಟವಾಗುತ್ತಿದೆ.ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಾಲೆ ಆರಂಭ ಮಾಡುತ್ತಿದ್ದೇವೆ. 1 ವರ್ಷದಿಂದ ಶಾಲೆ ಇಲ್ಲದೆ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಿದೆ.ಮಕ್ಕಳ ಭವಿಷ್ಯ ದೃಷ್ಟಿಯಿಂದ ಶಾಲೆ ಆರಂಭ ಮಾಡಿ ಅಂತ ಪೋಷಕರು, ಮಕ್ಕಳು ಎಲ್ಲಾ ಹೇಳುತ್ತಿದ್ದಾರೆ. ಆರಂಭದಲ್ಲಿ ಸ್ವಲ್ಪರಿಸ್ಕ್ ಇದ್ದರೂ ಅದನ್ನು ಎದುರಿಸುತ್ತೇವೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.

ಫಲಿತಾಂಶದ ಬಗ್ಗೆ ಅಸಮಾಧಾನವಿದ್ದಲ್ಲಿ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದು. ಒಂದುವೇಳೆ ಮರುಪರೀಕ್ಷೆ ಬರೆಯಲು ಇಚ್ಚಿಸಿದಲ್ಲಿ ಎರಡನೇ ಬಾರಿಗೆ ಅರ್ಜಿ ಸಲ್ಲಿಸಬಹುದು. ಅದಕ್ಕೆ ಶಿಕ್ಷಕರ ಸಹಾಯ ಪಡೆದು ಅಗತ್ಯವಿರುವ ದಾಖಲೆಗಳನ್ನು ಭರ್ತಿ ಮಾಡಿ ಮನವಿ ಮಾಡಬಹುದು. SSLC ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳೂ ಪಾಸ್ ಆಗಲಿದ್ದಾರೆ. ಫಲಿತಾಂಶವನ್ನು ಸಮತೋಲನದಿಂದ ತೆಗೆದುಕೊಳ್ಳಬೇಕು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ನೋಂದಣಿ ಸಂಖ್ಯೆ ನಮೂದಿಸಿ ಫಲಿತಾಂಶ ವೀಕ್ಷಿಸಬಹುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅಧಿಕಾರಿಗಳು ಹೇಳಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ನೂತನ ಸಚಿವ ಬಿ.ಸಿ.ನಾಗೇಶ್‌ ಅವರು ಫಲಿತಾಂಶ ಪ್ರಕಟಿಸಿದರು.


Spread the love