
Spread the love
ಎ. 20 ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ನಾಮಪತ್ರ ಸಲ್ಲಿಕೆ
ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಎಪ್ರಿಲ್ 20 ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಶಿವಮೊಗ್ಗ ಸಂಸದರಾದ ಬಿ ವೈ ರಾಘವೇಂದ್ರ, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸುನೀಲ್ ಕುಮಾರ್, ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಉದ್ಯಮಿ ಗೋವಿಂದ ಬಾಬು ಪೂಜಾರಿ, ಚಿತ್ರನಟಿ ಹಾಗೂ ಬಿಜೆಪಿ ನಾಯಕಿ ತಾರಾ ಸಹಿತ ಹಲವು ನಾಯಕರು ಭಾಗಿಯಾಗಲಿದ್ದಾರೆ.
ನಾಮಪತ್ರ ಸಲ್ಲಿಕೆಗೆ ಮೊದಲು ಬೆಳಿಗ್ಗೆ 9.30 ಕ್ಕೆ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಲಿದ್ದು, ಸುಮಾರು 25 ಸಾವಿರಕ್ಕೂ ಅಧಿಕ ಮಂದಿ ಭಾವಹಿಸುವ ನಿರೀಕ್ಷೆ ಇದೆ. ಬಳಿಕ ಬೈಂದೂರು ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Spread the love