ಎ. 23: ಬೈಂದೂರು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶಕ್ಕೆ ಡಿ ಕೆ ಶಿವಕುಮಾರ್

Spread the love

ಎ. 23: ಬೈಂದೂರು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶಕ್ಕೆ ಡಿ ಕೆ ಶಿವಕುಮಾರ್

ಕುಂದಾಪುರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಎ.23ರ ಭಾನುವಾರ ಮಧ್ಯಾಹ್ನ 2 ಗಂಟೆಗೆ ಬೈಂದೂರಿನಲ್ಲಿ ನಡೆಯಲಿರುವ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಬೈಂದೂರು ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ಹೇಳಿದರು.

ಅವರು ಬೈಂದೂರು ಕಾಂಗ್ರೆಸ್ ಕಛೇರಿಯಲ್ಲಿ ಆಯೋಜಿಸಲಾದ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿ, ಕ್ಷೇತ್ರದಲ್ಲಿ ಈಗಾಗಲೇ ಕಾಂಗ್ರೆಸ್ ಪರ ಅಲೆ ಇದ್ದು, ಡಿಕೆಶಿ ಅವರ ಕಾರ್ಯಕ್ರಮದಲ್ಲಿಯೇ ಬಿಜೆಪಿಯ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆ ಎಂದರು.

ರಾಜ್ಯ ಬಿಜೆಪಿ ಸರಕಾರ ಅಭಿವೃದ್ಧಿಯ ಭರವಸೆಯನ್ನಷ್ಟೇ ನೀಡುತ್ತಾ ಬಂದಿದ್ದು, ಯಾವುದನ್ನೂ ಕಾರ್ಯರೂಪಕ್ಕೆ ತಂದಿಲ್ಲ. ಕರಾವಳಿಯ ಮೀನುಗಾರರಿಗೆ ಅನ್ಯಾಯ ಎಸಗುತ್ತಲೇ ಬಂದಿದೆ. ಕಾಂಗ್ರೆಸ್ ಸರಕಾರದ ಅವಧಿಯಲ್ಲಿನ ಯೋಜನೆಗಳನ್ನು ಕಡಿತಗೊಳಿಸಿ ಜನರಿಗೆ ಮೋಸ ಮಾಡಿದ್ದು, ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ಗ್ಯಾರೆಂಟಿ ಯೋಜನೆ ತಕ್ಷಣ ಜಾರಿಗೆ ಬರಲಿದೆ ಎಂದರು.

ಈ ವೇಳೆ ಬೈಂದೂರು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷ ಡಾ. ಸುಬ್ರಹ್ಮಣ್ಯ ಭಟ್, ಮುಖಂಡರುಗಳಾದ ಎಸ್. ರಾಜು ಪೂಜಾರಿ, ರಘುರಾಮ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್. ಮದನ್ ಕುಮಾರ್ ಉಪ್ಪುಂದ, ನಾಗರಾಜ ಗಾಣಿಗ ಬಂಕೇಶ್ವರ, ಮೋಹನ ಪೂಜಾರಿ, ಜಗದೀಶ್ ದೇವಾಡಿಗ ಮೊದಲಾದವರು ಇದ್ದರು.


Spread the love