ಎ.9 ರಂದು ಎನ್ ಎಸ್ ಯುಐ ಸಂಸ್ಥಾಪನಾ ದಿನ

Spread the love

ಎ.9 ರಂದು ಎನ್ ಎಸ್ ಯುಐ ಸಂಸ್ಥಾಪನಾ ದಿನ

ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್ ಎಸ್ ಯುಐ) ಇದರ 50ನೇ ಸಂಸ್ಥಾಪನಾ ದಿನದ ಅಂಗವಾಗಿ ದ.ಕ.ಜಿಲ್ಲಾ ಎನ್ ಎಸ್ ಯು ಐ ಘಟಕದ ವತಿಯಿಂದ ಎ.9 ರಂದು ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಬೆಳಿಗ್ಗೆ 10ಕ್ಕೆ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದ್ದು, ಮಧ್ಯಾಹ್ನ 2:30ಕ್ಕೆ ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ವೇಳೆ ಜಿಲ್ಲೆಯ 120 ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು.

ಕಾರ್ಯಕ್ರಮದಲ್ಲಿ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಮಾಜಿ ಸಚಿವ ರಮಾನಾಥ ರೈ, ಶಾಸಕ ಯು.ಟಿ. ಖಾದರ್, ಮಿಥುನ್ ರೈ, ಮಾಜಿ ಶಾಸಕರುಗಳು, ಜಿಲ್ಲಾ ಕಾಂಗ್ರೆಸ್ ಮುಂಚೂಣಿ ಘಟಕಾಧ್ಯಕ್ಷರುಗಳು, ಸ್ಥಳೀಯ ಬ್ಲಾಕ್ ಅಧ್ಯಕ್ಷರುಗಳು ಮತ್ತಿತರ ನಾಯಕರುಗಳು ಭಾಗವಹಿಸಲಿರುವರು ಎಂದು ಎನ್ ಎಸ್ ಯುಐ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

Leave a Reply

Please enter your comment!
Please enter your name here