ಏಕಮುಖ ರಸ್ತೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ಮಾಜಿ ಪೊಲೀಸ್ ಅಧಿಕಾರಿ; ಇಬ್ಬರಿಗೆ ಗಾಯ

Spread the love

ಏಕಮುಖ ರಸ್ತೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ಮಾಜಿ ಪೊಲೀಸ್ ಅಧಿಕಾರಿ; ಇಬ್ಬರಿಗೆ ಗಾಯ

ಮಂಗಳೂರು: ನಿವೃತ್ತ ಪೊಲೀಸ್​ ವರಿಷ್ಠಾಧಿಕಾರಿಯೊಬ್ಬರು ಏಕಮುಖ ರಸ್ತೆಯಲ್ಲಿ  ಕಾರು ಚಲಾಯಿಸಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿರುವ ಘಟನೆ ಶನಿವಾರ ತಡರಾತ್ರಿ ಮಂಗಳೂರಿನ ಬಿಜೈನ ಬಟ್ಟಗುಡ್ಡೆಯಲ್ಲಿ ನಡೆದಿದೆ ಎನ್ನಲಾಗಿದೆ.

ಮಿತ್ರ ಹೆರಾಜೆ ಅಡ್ಡಾದಿಡ್ಡಿ ಕಾರು ಚಲಾಯಿಸಿದ ನಿವೃತ್ತ ಎಸ್ಪಿ ಎನ್ನಲಾಗಿದ್ದು, ಘಟನೆಯಲ್ಲಿ ಇಬ್ಬರು ಗಾಯಗೊಂಡಿರುವ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಸಾರ್ವಜನಿಕರು ಹೆರಾಜೆ ಅವರ ಕಾರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.

ಮಾಹಿತಿ ತಿಳಿದ ಕದ್ರಿ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು.


Spread the love