
ಏ.24 (ನಾಳೆ) ಉಡುಪಿಯಲ್ಲಿ ಡಿ ಕೆ ಶಿವಕುಮಾರ್ ಪಾದಯಾತ್ರೆ
ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾದ ಪ್ರಸಾದ್ ರಾಜ್ ಕಾಂಚನ್ ಅವರ ಪರ ಪ್ರಚಾರ ಮಾಡಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಸನ್ಮಾನ್ಯ ಡಿ ಕೆ ಶಿವಕುಮಾರ್ ಅವರು ಏಪ್ರಿಲ್ 24 ಸೋಮವಾರದಂದು ಸಂಜೆ 3.30 ಗಂಟೆಗೆ ಉಡುಪಿಗೆ ಆಗಮಿಸಲಿದ್ದಾರೆ.
ಸಹಸ್ರಾರು ಸಂಖ್ಯೆಯ ನಾಯಕರು ಹಾಗೂ ಕಾರ್ಯಕರ್ತರೊಂದಿಗೆ ಡಿ ಕೆ ಶಿವಕುಮಾರ್ ಅವರು ಪಾದಯಾತ್ರೆಯ ಮೂಲಕ ನಡೆದು ಕೊನೆಗೆ ಅಜ್ಜರಕಾಡಿನಲ್ಲಿರುವ ಹುತಾತ್ಮರ ಸ್ಮಾರಕದ ಬಳಿ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಪಾದಯಾತ್ರೆಯು ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿಯಿರುವ ನರ್ಮ್ ಬಸ್ ನಿಲ್ದಾಣದಿಂದ ಪ್ರಾರಂಭವಾಗಿ ಸರ್ವಿಸ್ ಬಸ್ ನಿಲ್ದಾಣದ ಮೂಲಕ ಸಾಗಿ ಕೆ.ಎಮ್ ಮಾರ್ಗದಿಂದ ತೆರಳಿ ಹಳೆ ತಾಲೂಕು ಕಚೇರಿಯ ಮುಂಬದಿಯಿಂದ ಸಾಗಿ ಅಜ್ಜರಕಾಡಿನಲ್ಲಿರುವ ಹುತಾತ್ಮರ ಸ್ಮಾರಕದ ಬಳಿ ಅಂತ್ಯಗೊಳ್ಳುವುದು.
ಪಾದಯಾತ್ರೆ ಮುಗಿದ ನಂತರ ಸಭೆಯನ್ನುದ್ದೇಶಿಸಿ ಕೆ.ಪಿ.ಸಿ.ಸಿ ಅಧ್ಯಕ್ಷರಾದ ಶ್ರೀ ಡಿ ಕೆ ಶಿವಕುಮಾರ್ ಅವರು ಮಾತನಾಡಲಿರುವರು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.