ಏ.27: ಚುನಾವಣಾ ಪ್ರಚಾರಕ್ಕಾಗಿ ಉಡುಪಿ ಜಿಲ್ಲೆಗೆ ರಾಹುಲ್ ಗಾಂಧಿ

Spread the love

ಏ.27: ಚುನಾವಣಾ ಪ್ರಚಾರಕ್ಕಾಗಿ ಉಡುಪಿ ಜಿಲ್ಲೆಗೆ ರಾಹುಲ್ ಗಾಂಧಿ

ಉಡುಪಿ: ವಿಧಾನಸಭಾ ಚುನಾವಣೆಯ ಪ್ರಚಾರ ನಿಮಿತ್ತ ಉಡುಪಿ ಜಿಲ್ಲೆಗೆ ಏಪ್ರಿಲ್ 23-24 ರಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಏಪ್ರಿಲ್ 27 ರಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷರಾದ ರಾಹುಲ್ ಗಾಂಧಿ ಆಗಮಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಹೇಳಿದರು.

ಅವರು ಕಾಂಗ್ರೆಸ್ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಏಪ್ರಿಲ್ 23 ರ ಮಧ್ಯಾಹ್ನ ಬೈಂದೂರಿನ ಉಪ್ಪುಂದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಡಿಕೆ ಶಿವಕುಮಾರ್ ಭಾಗವಹಿಸಿಲಿದ್ದು, ಬಳಿಕ ಕೊಲ್ಲೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಏಪ್ರಿಲ್ 24 ರ ಬೆಳಿಗ್ಗೆ ಕೊಲ್ಲೂರು ದೇವಸ್ಥಾನದಲ್ಲಿ ಚಂಡಿಕಾ ಹೋಮದಲ್ಲಿ ಭಾಗವಹಿಸಿ ಬಳಿಕ ಮಧ್ಯಾಹ್ನ ಉಡುಪಿಯಲ್ಲಿ ಸರ್ವಿಸ್ ಬಸ್ ನಿಲ್ದಾಣದಿಂದ ಹುತಾತ್ಮ ಸ್ಮಾರಕದ ವರೆಗೆ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಪಾದಯಾತ್ರೆಯಲ್ಲಿ ಉಡುಪಿ ಮತ್ತು ಬ್ರಹ್ಮಾವರ ಬ್ಲಾಕ್ ನಿಂದ ಸುಮಾರು 10000ಕ್ಕೂ ಅಧಿಕ ಜನರು ಭಾಗವಹಿಸಲಿದ್ದಾರೆ ಎಂದರು.

ರಾಹುಲ್ ಗಾಂಧಿ ಏಪ್ರಿಲ್ 27 ರಂದು ಕರಾವಳಿಗೆ ಜಿಲ್ಲೆಗೆ ಭೇಟಿ ಕೊಡಲಿದ್ದು, ಉಡುಪಿಯ ಉಚ್ಚಿಲದಲ್ಲಿ ನಡೆಯುವ ಬೃಹತ್ ಸಮಾವೇಶ ಭಾಗವಹಿಸಿ ಚುನಾವಣಾ ಪ್ರಚಾರ ಮಾಡಲಿದ್ದಾರೆ. ಇದಲ್ಲದೇ ಮೀನುಗಾರ ಸಮುದಾಯದೊಂದಿಗೆ ಸಂವಾದವನ್ನು ನಡೆಸಲಿದ್ದಾರೆ ಎಂದು ಕೊಡವೂರು ಹೇಳಿದರು. ಇದೇ ವೇಳೆ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಜಿಲ್ಲೆಗೆ ಆಗಮಿಸಲಿದ್ದು, ಮುಂದಿನ ದಿನಗಳಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಪ್ರಚಾರ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ನಾಯಕರಾದ ಪ್ರಸಾದ್ ರಾಜ್ ಕಾಂಚನ್, ಎಮ್ ಎ ಗಫೂರ್, ರಮೇಶ್ ಕಾಂಚನ್, ಹರೀಶ್ ಕಿಣಿ, ನರಸಿಂಹಮೂರ್ತಿ, ದಿನಕರ ಹೇರೂರು, ಅಮೃತ್ ಶೆಣೈ, ಭಾಸ್ಕರ್ ರಾವ್ ಕಿದಿಯೂರು ಹಾಗೂ ಇತರರು ಉಪಸ್ಥಿತರಿದ್ದರು.


Spread the love