
Spread the love
ಏ 27 (ನಾಳೆ) ಕಾಪುವಿಗೆ ರಾಹುಲ್ ಗಾಂಧಿ – ಮೀನುಗಾರರೊಂದಿಗೆ ಸಂವಾದ
ಉಡುಪಿ: ವಿಧಾನಸಭಾ ಚುನಾವಣೆಯ ಪ್ರಯುಕ್ತ ಪ್ರಚಾರದ ಸಲುವಾಗಿ ಏ 27 ರಂದು ಉಡುಪಿ ಜಿಲ್ಲೆಯ ಕಾಪು ಕ್ಷೇತ್ರಕ್ಕೆ ಆಗಮಿಸಲಿದ್ದಾರೆ ಎಂದು ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಹೇಳಿದರು.
ಕಾಪು ರಾಜೀವ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ನಾಳೆ ಚುನಾವಣಾ ಪ್ರಚಾರಕ್ಕಾಗಿ ಕಾಪುವಿನ ಉಚ್ಚಿಲಕ್ಕೆ ಆಗಮಿಸುವ ರಾಹುಲ್ ಗಾಂಧಿಯವರು ಮಧ್ಯಾಹ್ನ 3.00ಕ್ಕೆ ಉಚ್ಚಿಲ ಮಹಾಲಕ್ಷ್ಮೀ ದೇಗುಲದ ಸಭಾಂಗಣದಲ್ಲಿ ಮೀನುಗಾರರ ಜೊತೆ ಸಂವಾದ ನಡೆಸಲಿದ್ದು, ಮೀನುಗಾರರ ಕಷ್ಟ ನಷ್ಟಗಳ ಬಗ್ಗೆ ಚರ್ಚಿಸಲಿದ್ದಾರೆ. ಇದೇ ವೇಳೆ ಮೂಳೂರು ಭಾಗದಲ್ಲಿ ರೋಡ್ ಶೋ ಕೂಡ ನಡೆಸಲಿದ್ದು, ಕಾಪು ಕಾರ್ಯಕ್ರಮ ಮುಗಿಸಿ ಸಂಜೆ 5 ಗಂಟೆಗೆ ಮಂಗಳೂರಿಗೆ ತೆರಳಲಿದ್ದಾರೆ ಎಂದು ಸೊರಕೆ ಹೇಳಿದರು.
Spread the love