ಏ.29: ಚುನಾವಣಾ ಪ್ರಚಾರಕ್ಕಾಗಿ ಕಾಪು, ಬೈಂದೂರಿಗೆ ಅಮಿತ್ ಶಾ

Spread the love

ಏ.29: ಚುನಾವಣಾ ಪ್ರಚಾರಕ್ಕಾಗಿ ಕಾಪು, ಬೈಂದೂರಿಗೆ ಅಮಿತ್ ಶಾ

ಉಡುಪಿ: ರಾಜ್ಯ ವಿಧಾನಸಭಾ ಚುನಾವಣೆ ರಂಗೇರಿದ್ದು ರಾಜ್ಯಕ್ಕೆ ಪಕ್ಷಗಳ ಘಟಾನುಘಟಿ ನಾಯಕರು ಭೇಟಿ ನೀಡುತ್ತಿದ್ದು ಏಪ್ರಿಲ್ 29ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಉಡುಪಿ ಜಿಲ್ಲೆಗೆ ಆಗಮಿಸಲಿದ್ದು ಕಾಪು ಮತ್ತು ಬೈಂದೂರಿನಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಏಪ್ರಿಲ್ 29 ರಂದು ಮಧ್ಯಾಹ್ನ 2.20 ಕ್ಕೆ ಕೊಡಗು ಜಿಲ್ಲೆಯಿಂದ ಹೆಲಿಕಾಪ್ಟರ್ ಮೂಲಕ ಆದಿ ಉಡುಪಿ ಹೆಲಿಪ್ಯಾಡ್ ಗೆ ಆಗಮಿಸುವ ಅಮಿತ್ ಶಾ 2.30 ಕ್ಕೆ ಕಟಪಾಡಿ ಗ್ರೀನ್ ವ್ಯಾಲಿ ಮೈದಾನದಲ್ಲಿ ಉಡುಪಿ ಮತ್ತು ಕಾಪು ಬಿಜೆಪಿ ಅಭ್ಯರ್ಥಿಗಳಾದ ಯಶ್ಪಾಲ್ ಸುವರ್ಣ ಮತ್ತು ಗುರ್ಮೆ ಸುರೇಶ್ ಶೆಟ್ಟಿ ಪರವಾಗಿ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 3.25ಕ್ಕೆ ಆದಿ ಉಡುಪಿ ಹೆಲಿಪ್ಯಾಡ್ ನಿಂದ ಬೈಂದೂರು ಸಿದ್ದಾಪುರದ ಸರಕಾರಿ ಪ್ರೌಢ ಶಾಲೆ ಸಿದ್ದಾಪುರ ಹೆಲಿಪ್ಯಾಡ್ ಗೆ ಆಗಮಿಸಿ 4 ಗಂಟೆಗೆ ಸಿದ್ದಾಪುರ ಸರ್ಕಲ್ ನಲ್ಲಿ ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಪರವಾಗಿ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಬಳಿಕ ಹೆಲಿಕಾಪ್ಟರ್ ಮೂಲಕ ಮಂಗಳೂರಿಗೆ ತೆರಳಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.


Spread the love