ಐಎಂಎ ಕಂಪನಿ ಮಾಲೀಕ ಮನ್ಸೂರ್​ ಖಾನ್​ ಎಸ್​ಐಟಿ ವಶಕ್ಕೆ

ಐಎಂಎ ಕಂಪನಿ ಮಾಲೀಕ ಮನ್ಸೂರ್​ ಖಾನ್​ ಎಸ್​ಐಟಿ ವಶಕ್ಕೆ

ಬೆಂಗಳೂರು: ಐ ಮಾನಿಟರಿ ಅಡ್ವೈಸರಿ (ಐಎಂಎ) ಕಂಪನಿ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಎಸ್​ಐಟಿ ಅಧಿಕಾರಿಗಳು ಕಂಪನಿ ಮಾಲೀಕ ಮನ್ಸೂರ್​ ಖಾನ್​ನನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ.

ದುಬೈನಲ್ಲಿ ತಲೆಮರೆಸಿಕೊಂಡಿದ್ದ ಮನ್ಸೂರ್​ ಖಾನ್​ ಭಾರತಕ್ಕೆ ಆಗಮಿಸುತ್ತಿರುವ ಖಚಿತ ಮಾಹಿತಿನ್ನು ಆಧರಿಸಿ ಎಸ್​ಐಟಿ ಅಧಿಕಾರಿಗಳು ಗುರುವಾರ ಮಧ್ಯರಾತ್ರಿ 1.50 ಕ್ಕೆ ಮನ್ಸೂರ್​ನನ್ನು ವಶಕ್ಕೆ ಪಡೆದಿದ್ದಾರೆ.

ಐಎಂಎ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ಎಸ್​ಐಟಿ ರಚಿಸಿತ್ತು. ಜಾರಿ ನಿರ್ದೇಶನಾಲಯ ಸಹ ದೂರು ದಾಖಲಿಸಿಕೊಂಡು ಈ ಪ್ರಕರಣದ ತನಿಖೆ ನಡೆಸುತ್ತಿತ್ತು. ಇದುವರೆಗೂ ಮನ್ಸೂರ್​ ಖಾನ್​ ಮತ್ತು ಐಎಂಎ ವಿರುದ್ದ ಕಮರ್ಷಿಯಲ್​ ಸ್ಟ್ರೀಟ್​ ಪೊಲೀಸ್​ ಠಾಣೆಯಲ್ಲಿ 40 ಸಾವಿರಕ್ಕೂ ಹೆಚ್ಚು ವಂಚನೆ ದೂರು ದಾಖಲಾಗಿದೆ.