ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿ ನುಡಿದಂತೆ ನಡೆದ ಕಾಂಗ್ರೆಸ್ ಸರಕಾರ – ರಮೀಜ್ ಹುಸೇನ್ ಹರ್ಷ

Spread the love

ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿ ನುಡಿದಂತೆ ನಡೆದ ಕಾಂಗ್ರೆಸ್ ಸರಕಾರ – ರಮೀಜ್ ಹುಸೇನ್ ಹರ್ಷ

ಪಡುಬಿದ್ರಿ: ಚುನಾವಣಾ ಪೂರ್ವದಲ್ಲಿ ಭರವಸೆ ನೀಡಿದ ಐದು ಗ್ಯಾರಂಟಿಗಳನ್ನು ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದ ಕಾಂಗ್ರೆಸ್ ಸರಕಾರದ ನಿರ್ಧಾರಕ್ಕೆ ಕಾಪು ಯುವ ಕಾಂಗ್ರೆಸ್ ಅಧ್ಯಕ್ಷ ರಮೀಜ್ ಹುಸೇನ್ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಆರ್ಥಿಕ ವರ್ಷದಲ್ಲಿ ಘೋಷಣೆ ಮಾಡಿರುವ ಎಲ್ಲಾ ಗ್ಯಾರಂಟಿಗಳನ್ನು ಜಾರಿ ಮಾಡಿ ಚುನಾವಣಾ ಸಂದರ್ಭದಲ್ಲಿ ನೀಡಿದ ಭರವಸೆಯ ಮಾತನ್ನು ಈಡೇರಿಸಿದ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ರವರಿಗೆ ಅಭಿನಂದನೆಗಳು ಸಲ್ಲಿಸಲೇಬೇಕು. ಗ್ಯಾರಂಟಿ ಜಾರಿಗಳನ್ನು ಯಾವುದೇ ಜಾತಿ, ಧರ್ಮಗಳ ತಾರತಮ್ಯ ಇಲ್ಲದೇ ಗ್ಯಾರಂಟಿ ಯೋಜನೆ ಜಾರಿ ಗೊಳಿಸಿದ್ದಲ್ಲದೇ ಸಮಾನ್ಯ ಜನರಿಗೆ ಆಸರೆಯನ್ನು ನೀಡಿದೆ. ಜನ ಸಾಮಾನ್ಯರು ಬೆಲೆ ಏರಿಕೆ ಹಾಗೂ ಯುವ ಜನತೆ ನಿರುದ್ಯೋಗದ ಸಮಸ್ಯೆಯಿಂದ ತತ್ತರಿಸಿರುವ ಈ ಸಂದರ್ಭದಲ್ಲಿ ಜನರ ಬದುಕಿಗೆ ಅಸರೆ ನೀಡಿದ ಕಾಂಗ್ರೆಸ್ ಸರಕಾರದ ಈ ಸಾಧನೆ ನಿಜವಾಗಿ ಯು ಶಾಘ್ಲನೀಯ. ಜನರ ಕಷ್ಟಕ್ಕೆ ಸ್ಪಂದಿಸುವ ಸರಕಾರ ಎಂಬುದನ್ನು ಕಾಂಗ್ರೆಸ್ ಪಕ್ಷದ ಸಾಬೀತು ಪಡಿಸಿದೆ ಎಂದು ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love