ಐದು ಗ್ಯಾರಂಟಿಗಳನ್ನು ಜಾರಿಗೆ ತರುವ ಮೂಲಕ ಅಚ್ಚೇದಿನ್ ನೀಡಿದ ಕಾಂಗ್ರೆಸ್ – ಉಡುಪಿ ಯುವ ಕಾಂಗ್ರೆಸ್ ಅಧ್ಯಕ್ಷ ರವಿರಾಜ್ ರಾವ್ ಹರ್ಷ

Spread the love

ಐದು ಗ್ಯಾರಂಟಿಗಳನ್ನು ಜಾರಿಗೆ ತರುವ ಮೂಲಕ ಅಚ್ಚೇದಿನ್ ನೀಡಿದ ಕಾಂಗ್ರೆಸ್ – ಉಡುಪಿ ಯುವ ಕಾಂಗ್ರೆಸ್ ಅಧ್ಯಕ್ಷ ರವಿರಾಜ್ ರಾವ್ ಹರ್ಷ

ಉಡುಪಿ: ಚುನಾವಣಾ ಪೂರ್ವದಲ್ಲಿ ತನ್ನ ಪ್ರಣಾಳಿಕೆಯಲ್ಲಿ ರಾಜ್ಯದ ಜನತೆಗೆ ನೀಡಿದ ಐದು ಗ್ಯಾರೆಂಟಿ ( ಭರವಸೆ ) ಗಳನ್ನು ಜಾರಿಗೆ ತರುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ರಾಜ್ಯದ ಜನತೆಗೆ ನಿಜವಾದ ಅಚ್ಚೇ ದಿನ್ ನೀಡಿದ್ದಾರೆ ಎಂದು ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರವಿರಾಜ್ ರಾವ್ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ಐದು ಗ್ಯಾರಂಟಿಗಳನ್ನು ಜಾರಿಗೆ ತರುವುದಾಗಿ ಪಕ್ಷ ಪ್ರಣಾಳಿಕೆಯಲ್ಲಿ ಭರವಸೆಯನ್ನು ನೀಡಿದ್ದು ಈಗ ಈ ಮಾತನ್ನು ಉಳಿಕೊಂಡಿದೆ. ಐದು ಗ್ಯಾರಂಟಿಗಳಿಂದ ಮಹಿಳೆಯರು, ಯುವ ಪದವೀಧರರು ಹಾಗೂ ರಾಜ್ಯದ ಎಲ್ಲಾ ವರ್ಗದ ಜನತೆ ಲಾಭವನ್ನು ಪಡೆಯಲಿದ್ದಾರೆ. ಕಾಂಗ್ರೆಸ್ ಪಕ್ಷದ ಜನಪರ ಬದ್ಧತೆಗೆ ದೊಡ್ಡ ಇದೊಂದು ದೊಡ್ಡ ನಿದರ್ಶನವಾಗಿದೆ.

ಸರಕಾರವು ಅಸ್ತಿತ್ವಕ್ಕೆ ಬಂದ ಕೇವಲ ಎರಡು ವಾರಗಳಲ್ಲಿ ನಮ್ಮ ಇಚ್ಛಾಶಕ್ತಿಯನ್ನು ತೋರಿಸಿದ್ದೇವೆ. ಈ ಐದೂ ಗ್ಯಾರಂಟಿಗಳ ಅನುಷ್ಠಾನದ ಮೂಲಕ ರಾಜ್ಯದ ಜನತೆಯ ಸಬಲೀಕರಣ ದೊಡ್ಡ ಮಟ್ಟದಲ್ಲಿ ಸಾಧ್ಯವಾಗಲಿದೆ. ಇವೆಲ್ಲವೂ ಈಗ ನಿಗದಿಪಡಿಸಿರುವ ದಿನಾಂಕದಿಂದ ಪೂರ್ಣಪ್ರಮಾಣದಲ್ಲಿ ಮತ್ತು ಸಮರ್ಪಕವಾಗಿ ಜಾರಿಗೆ ಬರಲಿವೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love