ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ

Spread the love

ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ

ಧರ್ಮಸ್ಥಳ: ಸುಮಾರು ಐದು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಧರ್ಮಸ್ಥಳ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 65/2017ರಡಿ ಐಪಿಸಿ ಕಲಂ 397, 395 ಹಾಗೂ 34ರ ಪ್ರಕರಣದಲ್ಲಿ ಆರೋಪಿಯಾಗಿದ್ದ ಬೆಂಗಳೂರು ನಿವಾಸಿ ಮೂರ್ತಿ @ ಪಿಂಟು (37) ಎಂಬಾತ ಹಲವು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಗೈರಾಗಿದ್ದು, ತಲೆಮರೆಸಿಕೊಂಡಿದ್ದನು.

ಧರ್ಮಸ್ಥಳ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ವೃಷಭ ಹಾಗೂ ಚರಣ್ ರಾಜ್ ಅವರು ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಆಗಸ್ಟ್ 5, 2026ರಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.


Spread the love
Subscribe
Notify of

0 Comments