ಐವನ್ ಡಿಸೋಜರಿಗೆ ಮಂತ್ರಿಗಿರಿ ನೀಡಲು ಆಗ್ರಹಿಸಿ ಬೆಂಬಲಿಗರಿಂದ ಪ್ರತಿಭಟನೆ

Spread the love

ಐವನ್ ಡಿಸೋಜರಿಗೆ ಮಂತ್ರಿಗಿರಿ ನೀಡಲು ಆಗ್ರಹಿಸಿ ಬೆಂಬಲಿಗರಿಂದ ಪ್ರತಿಭಟನೆ

ಬೆಂಗಳೂರು: ವಿಧಾನಪರಿಷತ್ ಮುಖ್ಯ ಸಚೇತಕ ಹಾಗೂ ಸದಸ್ಯ ಐವನ್ ಡಿಸೋಜಾರಿಗೆ ಮಂತ್ರಿ ಪದವಿ ನೀಡುವಂತೆ ಐವನ್ ಪರ ಬೆಂಬಲಿಗರು ಬೆಂಗಳೂರಿನ ಕಾಂಗ್ರೆಸ್ ಕಚೇರಿಯ ಮುಂದೆ ಶನಿವಾರ ಪ್ರತಿಭಟನೆ ನಡೆಸಿದರು.

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಬೆಂಬಲಿಗರು ಸದಾಶಿವ ನಗರದಲ್ಲಿರುವ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ನಿವಾಸದ ಮುಂದೆ ಜಮಾಯಿಸಿ, ತಮ್ಮ ನಾಯಕನಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದರು.

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಪರ ಲಾಬಿ ನಡೆಸಲು ಬೆಂಬಲಿಗರು ಡಿಸಿಎಂ ನಿವಾಸಕ್ಕೆ ಆಗಮಿಸಿ ಮನವಿ ಪತ್ರ ಸಲ್ಲಿಸಿದರು. ಐವನ್ ಪಕ್ಷ ಸಂಘಟನೆಗೆ ಸಾಕಷ್ಟು ಕೆಲಸಗಳನ್ನು ಮಾಡಿದ್ದಾರೆ. ಹೀಗಾಗಿ ಅವರಿಗೆ ಅಲ್ಪಸಂಖ್ಯಾತ ಕೋಟಾದಲ್ಲಿ ಮಂತ್ರಿ ಸ್ಥಾನ ನೀಡುವಂತೆ ಬೆಂಬಲಿಗರ ನಿಯೋಗ ಪರಮೇಶ್ವರರಿಗೆ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭ ಐವನ್ ಪರ ಬೆಂಬಲಿಗರು ಘೋಷಣೆಗಳನ್ನು ಕೂಗಿದರು.

ಮನವಿ ಸ್ವೀಕರಿಸಿ ಮಾತನಾಡಿದ ಪರಮೇಶ್ವರ್ ಅವರು, ಐವನ್ಡಿಸೋಜ ಮೊದಲ ಬಾರಿ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ. ಅವರನ್ನು ವಿಧಾನ ಪರಿಷತ್ತಿನ ಮುಖ್ಯ ಸಚೇತಕರನ್ನಾಗಿ ಮಾಡಲಾಗಿದೆ. ಮುಂದೆ ಅವರನ್ನು ಸಚಿವ ಸ್ಥಾನಕ್ಕೆ ಪರಿಗಣಿಸಲಾಗುವುದು ಎಂದು ಭರವಸೆ ನೀಡಿದರು.


Spread the love

2 Comments

  1. How many seats Congress won in undivided D.K? What is the contribution of Ivan for the lone winner? Please wait, and you will get.

  2. LOL Mr.D’Souza playing minority card again without realizing how Congress party favors only Muslims, not Catholics. Remember – Christians are ‘aatakkuntu, lekkakkilla’.

Comments are closed.