ಒಳಮೀಸಲಾತಿ ಜಾರಿಗೆ ಬಂಜಾರ ಸಮುದಾಯದಿಂದ ವಿರೋಧ: ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ

Spread the love

ಒಳಮೀಸಲಾತಿ ಜಾರಿಗೆ ಬಂಜಾರ ಸಮುದಾಯದಿಂದ ವಿರೋಧ: ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ

ಶಿವಮೊಗ್ಗ: ಒಳಮೀಸಲಾತಿ ಜಾರಿಗೆ ಬಂಜಾರ ಸಮುದಾಯದಿಂದ ತೀವ್ರ ವಿರೋಧ ವ್ಯಕ್ತ ಹಿನ್ನೆಲೆ ಜಿಲ್ಲೆಯ ಶಿಕಾರಿಪುರ ಪಟ್ಟಣದಲ್ಲಿರುವ ಮಾಜಿ ಸಿಎಂ ಯಡಿಯೂರಪ್ಪ  ಅವರ ಮೈತ್ರಿ ನಿವಾಸದ ಮೇಲೆ ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಲಾಗಿದೆ.

ಪ್ರತಿಭಟನಾಕಾರರು ಯಡಿಯೂರಪ್ಪ ಮನೆಯ ಕಿಟಕಿ ಗಾಜು ಒಡೆದು ಹಾಕಿದ್ದು, ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ, ತಳ್ಳಾಟ ನೂಕಾಟ ಉಂಟಾಗಿದ್ದು, ಪ್ರತಿಭಟನಾಕಾರರು ಪೊಲೀಸರ ಮೇಲೆಯೇ ಚಪ್ಪಲಿ, ಕಲ್ಲು ತೂರಿದ್ದಾರೆ.

ಘಟನೆಯಲ್ಲಿ ಕೆಲವು ಪೊಲೀಸ್​ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಉದ್ರಿಕ್ತರನ್ನು ನಿಯಂತ್ರಿಸಲು ಪೊಲೀಸರಿಂದ ಲಘು ಲಾಠಿ ಪ್ರಹಾರ ಮಾಡಲಾಗಿದೆ. ಶಿಕಾರಿಪುರ ತಾಲೂಕು ಕಚೇರಿ ಎದುರು ಪ್ರತಿಭಟನೆ ಮುಂದುವರೆದಿದೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ರವಾನೆ ಮಾಡಲಾಗಿದೆ.


Spread the love