ಓಣಂ ಪ್ರಯುಕ್ತ ಕೇರಳಕ್ಕೆ ವಿಶೇಷ ಬಸ್ ವ್ಯವಸ್ಥೆ

Spread the love

ಓಣಂ ಪ್ರಯುಕ್ತ ಕೇರಳಕ್ಕೆ ವಿಶೇಷ ಬಸ್ ವ್ಯವಸ್ಥೆ

ಬೆಂಗಳೂರು: ಓಣಂ ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ ಕೇರಳಕ್ಕೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ ಆರ್ ಟಿಸಿ ವಿಶೇಷ ಬಸ್ ವ್ಯವಸ್ಥೆ ಮಾತ್ರವಲ್ಲದೆ ದರದಲ್ಲಿ ರಿಯಾಯಿತಿಯನ್ನು ಪ್ರಕಟಿಸಿದೆ.

ಸೆ.08ರಂದು ತಿರು ಓಣಂ ಹಬ್ಬದ ಆಚರಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ಸೆ. 06 ಮತ್ತು 07 ರಂದು ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ ಹಾಲಿ ಕಾರ್ಯಾಚರಿಸುತ್ತಿರುವ ಸಾರಿಗೆಗಳ ಜೊತೆಗೆ ಹೆಚ್ಚುವರಿ ಬಸ್ಸುಗಳ ವಿಶೇಷ ವ್ಯವಸ್ಥೆ ಮಾಡಲಾಗಿದ್ದು, ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣ ಹಾಗೂ ಶಾಂತಿನಗರ ಬಸ್ ನಿಲ್ದಾಣದಿಂದ ಕೇರಳ ರಾಜ್ಯಕ್ಕೆ ಅಂದರೆ ಕಣ್ಣೂರು, ಕೋಜಿಕೋಡ್, ಎರ್ನಾಕುಲಂ, ಪಾಲಕ್ಕಾಡ್, ತ್ರಿಶೂರ್, ಕೊಟ್ಟಾಯಂ, ತಿರುವನಂತಪುರಂ ಮುಂತಾದ ಸ್ಥಳಗಳಿಗೆ ವಿಶೇಷ ವಾಹನಗಳು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ನಿಲ್ಲಾಣದಿಂದ ವಿಶೇಷ ಬಸ್ ಗಳು ಹೊರಡಲಿವೆ.

ಇನ್ನು ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೇಟ್‍ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು. ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೆರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‍ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ. ಇ-ಟಿಕೇಟ್ ಬುಕಿಂಗ್‍ನ್ನು www.ksrtc.karnataka.gov.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


Spread the love

Leave a Reply

Please enter your comment!
Please enter your name here