ಓಮಿಕ್ರಾನ್ ಸೋಂಕು ಹಿನ್ನೆಲೆ: ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಘೋಷಣೆ

Spread the love

ಓಮಿಕ್ರಾನ್ ಸೋಂಕು ಹಿನ್ನೆಲೆ: ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಘೋಷಣೆ

ಬೆಂಗಳೂರು: ದಕ್ಷಿಣ ಆಫ್ರಿಕಾದಿಂದ ಬಂದಿದ್ದವರ ಪೈಕಿ ಇಬ್ಬರಿಗೆ ಓಮಿಕ್ರಾನ್ ಕೊರೋನಾ ರೂಪಾಂತರಿ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸೋಂಕು ತಡೆಗೆ ರಾಜ್ಯ ಸರ್ಕಾರ ಡಿ.03 ರಂದು ನಿರ್ದಿಷ್ಟ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಕೊರೋನಾ ತಡೆಗೆ ಸಿಎಂ ನಡೆಸಿದ ಉನ್ನತಮಟ್ಟದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಕಂದಾಯ ಸಚಿವ ಆರ್ ಅಶೋಕ್, ಮಾಲ್, ಥಿಯೇಟರ್ ಗೆ ತೆರಳುವವರು ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡಿದಿರಬೇಕೆಂಬ ನಿಯಮ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಮದುವೆ ಸಮಾರಂಭಗಳಿಗೂ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿದ್ದು, 500 ಮಾತ್ರ ಸೇರಬೇಕು ಎಂಬ ನಿಯಮ ಜಾರಿಗೆ ಬಂದಿದೆ.

ಶಾಲಾ ಕಾಲೇಜುಗಳಲ್ಲಿ ಕೊರೋನಾ ಹೆಚ್ಚು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮಕ್ಕಳನ್ನು ಶಾಲೆಗೆ ಕಳಿಸುವ ವಿದ್ಯಾರ್ಥಿಗಳ ಪೋಷಕರಿಗೆ ಹಾಗೂ ಬೋಧಕ ಸಿಬ್ಬಂದಿಗಳಿಗೆ 2 ಡೊಸ್ ಲಸಿಕೆ ಕಡ್ಡಾಯಗೊಳಿಸಲಾಗಿದೆ ಹಾಗೂ 2022 ರ ಜನವರಿ 15 ವರೆಗೂ ಶಾಲಾ ಕಾಲೇಜುಗಳಲ್ಲಿ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ.

ಇದೇ ವೇಳೆ ನಾಪತ್ತೆಯಾಗಿರುವ ದಕ್ಷಿಣ ಆಫ್ರಿಕಾದಿಂದ ಬಂದವರ ಪೈಕಿ 10 ಮಂದಿ ನಾಪತ್ತೆಯಾಗಿರುವುದರ ಬಗ್ಗೆಯೂ ಸಚಿವ ಆರ್ ಅಶೋಕ್ ಮಾತನಾಡಿದ್ದು, ರಾತ್ರಿಯೊಳಗೆ ಪತ್ತೆ ಮಾಡುತ್ತೇವೆ ಎಂದಷ್ಟೇ ಹೇಳಿದ್ದಾರೆ. ಇನ್ನು ಕೋವಿಡ್-19 ಹೊಸ ಸೋಂಕು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಪ್ರತಿನಿತ್ಯ 1 ಲಕ್ಷ ಕೋವಿಡ್-19 ಟೆಸ್ಟ್ ಮಾಡಲು ಸರ್ಕಾರ ಆದೇಶ ನೀಡಿದೆ.


Spread the love