ಕಂಬಳ ನೋಡಲು ಮಂಗಳೂರಿನಿಂದ ಬೆಂಗಳೂರಿಗೆ ಬಂದಿದ್ದ ಇಬ್ಬರು ಅಪಘಾತದಲ್ಲಿ ಮೃತ್ಯು

Spread the love

ಕಂಬಳ ನೋಡಲು ಮಂಗಳೂರಿನಿಂದ ಬೆಂಗಳೂರಿಗೆ ಬಂದಿದ್ದ ಇಬ್ಬರು ಅಪಘಾತದಲ್ಲಿ ಮೃತ್ಯು

ಬೆಂಗಳೂರು: ಮೊದಲ ಬಾರಿಗೆ ಬೆಂಗಳೂರಿನಲ್ಲಿ ಅರಮನೆ ಮೈದಾನದಲ್ಲಿ ಕೋಣಗಳ ಓಟ ನೋಡಲು ಬೆಂಗಳೂರಿನ ಮೂಲೆ ಮೂಲೆಗಳಿಂದ ಆಗಮಿಸಿದ್ದು ಈ ಕಂಬಳವನ್ನು ನೋಡಲು ಮಂಗಳೂರಿನ ಬಂದಿದ್ದ ಇಬ್ಬರು ಅಪಘಾತದಲ್ಲಿ ದುರಂತ ಅಂತ್ಯ ಕಂಡಿದ್ದಾರೆ.

ಬೋರ್ವೆಲ್ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಕಂಬಳ ನೋಡಲು ಬಂದು ವಾಪಾಸಾಗುತ್ತಿದ್ದ ಇಬ್ಬರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಚಿಗಣಿಪಾಳ್ಯ ಬಳಿ ನಡೆದಿದೆ,

ಮೃತರನ್ನು ಸದ್ಯ ಕೆಂಜಾರು ನಿವಾಸಿ ಕಿಶಾನ್ ಶೆಟ್ಟಿ( 20 ) ದಕ್ಷಿಣ ಕನ್ನಡ ಜಿಲ್ಲೆ ಭಟ್ಟರ ತೋಟ ಗ್ರಾಮದ ಫಿಲೀಪ್ ನೇರಿ ಲೋಬೋ (32) ಎಂದು ಗುರುತಿಸಲಾಗಿದೆ.

ಬೆಂಗಳೂರಿನಲ್ಲಿ ಕಂಬಳ ನೋಡಿ ವಾಪಸ್ ಆಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಇನ್ನು ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ನಿತೀಶ್ ಭಂಡಾರಿ, ಪ್ರೀತಿ ಲೋಬೋ, ಹರೀಶ್ ತೀವ್ರವಾಗಿ ಗಾಯಗೊಂಡು  ಅವರನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಾರಿ ಗುದ್ದಿದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ಅಪ್ಪಚ್ಚಿಯಾಗಿದ್ದು, ಪೊಲೀಸರು ಹಾಗೂ ಸ್ಥಳೀಯರು ಹರಸಾಹಸಪಟ್ಟು ಮೃತದೇಹಗಳನ್ನು ಹೊರತೆಗೆದಿದ್ದಾರೆ.

ಈ ಬಗ್ಗೆ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.


Spread the love