ಕಚ್ಚೂರು ಮಾಲ್ತಿದೇವಿ ಬಬ್ಬುಸ್ವಾಮಿ ದೇವಸ್ಥಾನಕ್ಕೆ ಯಶ್ ಪಾಲ್ ಸುವರ್ಣ ಭೇಟಿ

Spread the love

ಕಚ್ಚೂರು ಮಾಲ್ತಿದೇವಿ ಬಬ್ಬುಸ್ವಾಮಿ ದೇವಸ್ಥಾನಕ್ಕೆ ಯಶ್ ಪಾಲ್ ಸುವರ್ಣ ಭೇಟಿ

ಉಡುಪಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್ಪಾಲ್ ಸುವರ್ಣ ಹಾಗೂ ಶಾಸಕ ರಘುಪತಿ ಭಟ್ ಕಚ್ಚೂರು ಮಾಲ್ತಿದೇವಿ ದೈವಸ್ಥಾನ ಶ್ರೀ ಬಬ್ಬಸ್ವಾಮಿ ಮೂಲಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು.

ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರ ಪರಿಶಿಷ್ಟ ಜಾತಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಮೀಸಲಾತಿ ಹೆಚ್ಚಳ ಹಾಗೂ ಕಚ್ಚೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಸರಕಾರ ವಿಶೇಷ ಅನುದಾನ ಒದಗಿಸುವ ಮೂಲಕ ಪರಿಶಿಷ್ಟ ಜಾತಿಗೆ ವಿಶೇಷ ಮಾನ್ಯತೆ ನೀಡಿದೆ.

ಮುಂದಿನ ದಿನಗಳಲ್ಲಿಯೂ ದೇಗುಲದ ಅಭಿವೃದ್ದಿ ಹಾಗೂ ಸಮಾಜದ ಸರ್ವರ ಏಳಿಗೆಗೆ ಕಟಿಬದ್ದರಾಗಿ ಸೇವೆ ಸಲ್ಲಿಸಲು ಮತ್ತೊಮ್ಮೆ ಬಿಜೆಪಿಗೆ ಅವಕಾಶ ನೀಡಲು ಮತದಾನದ ಮೂಲಕ ಆಶೀರ್ವದಿಸುವಂತೆ ಯಶ್ ಪಾಲ್ ಸುವರ್ಣ ಕೋರಿದರು.

ಶಾಸಕ ರಘುಪತಿ ಭಟ್ ಮಾತನಾಡಿ ನನ್ನ ಶಾಸಕತ್ವ ಅವಧಿಯಲ್ಲಿ ಶ್ರೀ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರದ ಮೂಲಕ ಗರಿಷ್ಠ ಅನುದಾನ ಒದಗಿಸಿದ್ದು, ಮುಂದಿನ ದಿನಗಳಲ್ಲಿಯೂ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ರನ್ನು ಗೆಲ್ಲಿಸುವ ಮೂಲಕ ಕ್ಷೇತ್ರದ ಸೇವೆಗೆ ಅವಕಾಶ ನೀಡುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಧರ್ಮದರ್ಶಿ ಗೋಕುಲ್ ದಾಸ್ ಬಾರ್ಕೂರು, ದೇವಸ್ಥಾನದ ಅಧ್ಯಕ್ಷರಾದ ಶಿವಪ್ಪ ನಂತೂರು, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ದಿನಕರ ಬಾಬು, ತೆಂಕನಿಡಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗಾಯತ್ರಿ, ಗಣ್ಯರಾದ ರಘುರಾಮ ಪುತ್ತೂರು, ಶಿವರಾಜ್ ಮಲ್ಲಾರು, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love