
Spread the love
ಕಟಪಾಡಿಯಲ್ಲಿ ಬಸ್ಸು – ಬೈಕ್ ನಡುವೆ ಅಫಘಾತ: ಸವಾರ ಸ್ಥಳದಲ್ಲೇ ಮೃತ್ಯು
ಉಡುಪಿ: ಬೈಕ್ ಮತ್ತು ಬಸ್ಸಿನ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66 ರ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನ ಕಟಪಾಡಿ ಸರಕಾರಿ ಗುಡ್ಡೆ ನಿವಾಸಿ ಇಕ್ಬಾಲ್ (32) ಎಂದು ಗುರುತಿಸಲಾಗಿದೆ. ಇವರು ಮಲ್ಲಿಗೆ ಹೂವಿನ ವ್ಯಾಪಾರವನ್ನು ಮಾಡುತ್ತಿದ್ದರು.
ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66 ರ ಸರ್ವಿಸ್ ರಸ್ತೆಯಲ್ಲಿ ಉಡುಪಿಯಿಂದ ಮಂಗಳೂರು ಬಸ್ಸು ಇಕ್ಬಾಲ್ ಅವರು ಬೈಕಿಗೆ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Spread the love