ಕಟಪಾಡಿ: ಪ್ರಥಮ ಪಿಯುಸಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ

Spread the love

ಕಟಪಾಡಿ: ಪ್ರಥಮ ಪಿಯುಸಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ

ಉಡುಪಿ: ಪ್ರಥಮ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಟಪಾಡಿ ಮೂಡಬೆಟ್ಟು ಗ್ರಾಮದ ಕಲ್ತಟ್ಟ ಎಂಬಲ್ಲಿ ನಡೆದಿದೆ.

ಕಲ್ತಟ್ಟ ನಿವಾಸಿ ಆನಂದ ಪೂಜಾರಿ ಅವರ ಪುತ್ರಿ ಅನನ್ಯಾ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ

ಶಂಕರಪುರ ಸೈಂಟ್ ಜೋನ್ ಪ.ಪೂ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಈಕೆ ಮಂಗಳವಾರ ರಾತ್ರಿ ತಂದೆ ತಾಯಿ ಮತ್ತು ಸಹೋದರನೊಂದಿಗೆ ಒಂದೇ ಕೋಣೆಯಲ್ಲಿ ಮಲಗಿದ್ದು, ಬಳಿಕ ಪಕ್ಕದ ಕೋಣೆಗೆ ಹೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.

ಓದಿನಲ್ಲಿ ಚುರುಕಾಗಿದ್ದ ಅನನ್ಯ ಎಲ್ಲರೊಂದಿಗೂ ಅನ್ಯೋನ್ಯವಾಗಿದ್ದು ಆತ್ಮಹತ್ಯೆಗೆ ನಿಖರ ಕಾರಣಗಳು ತಿಳಿದುಬಂದಿಲ್ಲ. ತಂದೆ ತಾಯಿ ಮತ್ತು ಸಹೋದರನನ್ನು ಅಗಲಿದ್ದಾಳೆ.

ಕಾಪು ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


Spread the love