ಕಟಪಾಡಿ:  ರಸ್ತೆ ಬ್ಯಾರಿಕೆಡ್ ಗೆ ಬೈಕ್ ಡಿಕ್ಕಿ – ವಿವಾಹ ನಿಶ್ಚಯವಾಗಿದ್ದ ಯುವತಿ ಮೃತ್ಯು

Spread the love

ಕಟಪಾಡಿ:  ರಸ್ತೆ ಬ್ಯಾರಿಕೆಡ್ ಗೆ ಬೈಕ್ ಡಿಕ್ಕಿ – ವಿವಾಹ ನಿಶ್ಚಯವಾಗಿದ್ದ ಯುವತಿ ಮೃತ್ಯು

ಕಟಪಾಡಿ: ರಾಷ್ಟ್ರೀಯ ಹೆದ್ದಾರಿ 66 ಕಟಪಾಡಿ ಮೂಡಬೆಟ್ಟು ಬಳಿ   ಹೆದ್ದಾರಿ ಕಾಮಗಾರಿಗೆ ಅಡ್ಡಲಾಗಿ ಹಾಕಿದ್ದ ಬ್ಯಾರಿಕೆಡ್ ಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಹಿಂಬದಿಯಲ್ಲಿದ್ದ ಯುವತಿ ಸಾವನ್ನಪ್ಪಿದ ಘಟನೆ ಸೋಮವಾರ  ನಡೆದಿದೆ.

ಮೃತ ಯುವತಿಯನ್ನು ಮಂಗಳೂರಿನ ರೋಶ್ನಿ ಡಿ’ಸೋಜಾ(27) ಎಂದು ಗುರುತಿಸಲಾಗಿದ್ದು ಇತ್ತೀಚೆಗಷ್ಠೆ ಅವರ ವಿವಾಹ ನಿಶ್ಚಯವಾಗಿತ್ತು ಎನ್ನಲಾಗಿದೆ.

ರೋಶ್ನಿ ಅವರು ಸೋಮವಾರ ತನಗೆ ವಿವಾಹ ನಿಶ್ಚಯವಾಗಿದ್ದ ಯುವಕ ಜೊಯೇಲ್ ಎಂಬವರ ಜೊತೆ ಮಂಗಳೂರಿನಿಂದ ಕಲ್ಮಾಡಿ ಚರ್ಚಿಗೆ ಭೇಟಿ ನೀಡಿ ವಾಪಾಸಾಗುತ್ತಿದ್ದ ವೇಳೆ ಕಟಪಾಡಿ ಸಮೀಪದ ಮೂಡಬೆಟ್ಟು ಅಂಬಿಕಾ ಟಿಂಬರ್ ಬಳಿ ಹಾಕಲಾಗಿದ್ದ ಬ್ಯಾರಿಕೆಡ್ ಗೆ ಬೈಕ್ ಡಿಕ್ಕಿ ಹೊಡೆದಿದ್ದು, ಹಿಂಬದಿಯಲ್ಲಿ ಕುಳಿತಿದ್ದ ರೋಶ್ನಿ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗೊಂಡಿದ್ದು, ತಕ್ಷಣ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ದಾರಿ ಮಧ್ಯೆ ರೋಶ್ನಿ ಮೃತರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಬೈಕ್ ಸವಾರ ಜೊಯೇಲ್ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love