ಕಡಬ | ಕೌಟುಂಬಿಕ ಕಾರಣಕ್ಕೆ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಯುವಕ ಮೃತ್ಯು

Spread the love

ಕಡಬ | ಕೌಟುಂಬಿಕ ಕಾರಣಕ್ಕೆ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಯುವಕ ಮೃತ್ಯು

ಕಡಬ: ಕೌಟುಂಬಿಕ ಕಾರಣದಿಂದ ಮನನೊಂದು ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬುಧವಾರದಂದು ವರದಿಯಾಗಿದೆ.

ಕಡಬದ ಕುಟ್ರುಪ್ಪಾಡಿ ಗ್ರಾಮದ ಉಳಿಪ್ಪು ನಿವಾಸಿ ರಾಕೇಶ್ ಕೆ.ಎಸ್ (37) ಮೃತ ಯುವಕ.

ನ.19 ರಂದು ಅಮಲು ಪದಾರ್ಥದೊಂದಿಗೆ ಇಲಿ ಪಾಷಣ ಸೇವಿಸಿ ಆತ್ಮಹತ್ಯೆ ಮಾಡಲು ಯತ್ನಿಸಿದ್ದ. ಅಸ್ವಸ್ಥಗೊಂಡಿದ್ದ ಆತನನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದರು. ಬಳಿಕ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರದಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಆತನ ಪತ್ನಿಯೊಂದಿಗೆ ಆತನ ಗೆಳೆಯನೊಬ್ಬ ಮೊಬೈಲ್ ಪೋನ್ ಮೂಲಕ ಸಂಪರ್ಕದಲ್ಲಿರುವ ವಿಷಯ ತಿಳಿದು ತೀವ್ರ ನೊಂದು ಆತ್ಮಹತ್ಯೆಗೆ ಯತ್ನಿಸಿರುವುದಾಗಿ ಮೃತ ಯುವಕನ ತಂದೆ ಸೊಲೊಮೊನ್ ಎಂಬವರು ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love