ಕಡಬ| ಗುಂಡ್ಯ ಹೊಳೆಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರು ಮೃತ್ಯು

Spread the love

ಕಡಬ| ಗುಂಡ್ಯ ಹೊಳೆಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರು ಮೃತ್ಯು

ಕಡಬ: ಗುಂಡ್ಯ ಹೊಳೆಯ ಕೊಲ್ಯದಕಟ್ಟ ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಶುಕ್ರವಾರ ಸಂಜೆ ನಡೆದಿದೆ.

ಮೃತ ವಿದ್ಯಾರ್ಥಿನಿಯರನ್ನು ಕುಟ್ರುಪ್ಪಾಡಿ ಗ್ರಾಮದ ವಿಮಲಗಿರಿ ನಿವಾಸಿಗಳಾದ ಅರ್ಪಿತಾ (15) ಹಾಗೂ ಸುನೀತಾ (21) ಎಂದು ಗುರುತಿಸಲಾಗಿದೆ.

ರಜೆ ಇರುವುದರಿಂದ ಸ್ನೇಹಿತರ ತಂಡದೊಂದಿಗೆ ನದಿಗೆ ಆಗಮಿಸಿದ್ದ ಐವರು ವಿದ್ಯಾರ್ಥಿನಿಯರು ಸ್ನಾನಕ್ಕಾಗಿ ನೀರಿಗೆ ಇಳಿದಿದ್ದು, ಈ ವೇಳೆ ಇಬ್ಬರು ವಿದ್ಯಾರ್ಥಿನಿಯರು ನೀರಿನ ಆಳ ತಿಳಿಯದೆ ಮುಳುಗತೊಡಗಿದ್ದಾರೆ. ಜೊತೆಯಲ್ಲಿದ್ದವರು ರಕ್ಷಿಸಲು ಯತ್ನಿಸಿದರೂ ಸಾಧ್ಯವಾಗದೆ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯರ ಸಹಕಾರದಿಂದ ಮೃತದೇಹಗಳನ್ನು ಮೇಲಕ್ಕೆತ್ತಲಾಗಿದೆ ಎಂದು ತಿಳಿದುಬಂದಿದೆ.


Spread the love
Subscribe
Notify of

0 Comments
Inline Feedbacks
View all comments