ಕಡಬ: ನ.28 ರಂದು ಲೋಕಾಯುಕ್ತ ಜನಸಂಪರ್ಕ ಸಭೆ

Spread the love

ಕಡಬ: ನ.28 ರಂದು ಲೋಕಾಯುಕ್ತ ಜನಸಂಪರ್ಕ ಸಭೆ

ಮಂಗಳೂರು: ಲೋಕಾಯುಕ್ತ ಜನ ಸಂಪರ್ಕ ಸಭೆ ನವೆಂಬರ್ 28 ರಂದು ಬೆಳಿಗ್ಗೆ 11 ಗಂಟೆಯಿಂದ ಕಡಬ ತಾಲೂಕು ಕಛೇರಿಯಲ್ಲಿ ಆಯೋಜಿಸಲಾಗಿದೆ.

ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ನವೆಂಬರ್ 28 ರಂದು ರಂದು ಕಡಬ ತಾಲೂಕು ಕಛೇರಿ ಇಲ್ಲಿಗೆ ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದು.

ಇದಲ್ಲದೇ ಉಳಿದ ದಿನಗಳಲ್ಲೂ ಕಛೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದು.

ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆಗಳು: ಪೊಲೀಸ್ ಅಧೀಕ್ಷಕರ ಕಛೇರಿ- 0824 – 2950997, 9364062517, ಪೊಲೀಸ್ ಉಪಾಧೀಕ್ಷಕರ ಕಛೇರಿ 1-0824 – 2453420, 9364062579, ಪೊಲೀಸ್ ಉಪಾಧೀಕ್ಷಕರ ಕಛೇರಿ 2- 0824 2453420, 9364062580, ಪೊಲೀಸ್ ನಿರೀೀಕ್ಷಕರು 1 ಕಛೇರಿ- 0824 – 2427237, 9364062691, ಪೊಲೀಸ್ ನಿರೀೀಕ್ಷಕರು 2 ಕಛೇರಿ- 9364062692, ಪೊಲೀಸ್ ನಿರೀೀಕ್ಷಕರು 3 ಕಛೇರಿ- 9364062693.

ಅರ್ಜಿದಾರರು ನಮೂನೆ I & II ರಲ್ಲಿ ಭರ್ತಿ ಮಾಡಿ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಈ ಕಛೇರಿಗೆ ಅಥವಾ ನೇರವಾಗಿ ಮಾನ್ಯ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ.ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ರವರಿಗೆ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.


Spread the love
Subscribe
Notify of

0 Comments
Inline Feedbacks
View all comments