ಕಡಬ: ವಿದ್ಯುತ್ ಆಘಾತಕ್ಕೊಳಗಾಗಿ ಲೈನ್ ಮ್ಯಾನ್ ಮೃತ್ಯು

Spread the love

ಕಡಬ: ವಿದ್ಯುತ್ ಆಘಾತಕ್ಕೊಳಗಾಗಿ ಲೈನ್ ಮ್ಯಾನ್ ಮೃತ್ಯು
 

ಕಡಬ: ವಿದ್ಯುತ್ ಕಂಬವೇರಿದ್ದ ಲೈನ್ ಮ್ಯಾನ್ ಓರ್ವರು ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟ ದಾರುಣ ಘಟನೆ ಗುರುವಾರದಂದು ಕಡಬದಲ್ಲಿ ನಡೆದಿದೆ.

ಮೃತರನ್ನು ಬಾಗಲಕೋಟೆ ಮೂಲದ ದ್ಯಾಮಣ್ಣ ಎಂದು ಗುರುತಿಸಲಾಗಿದೆ.

ಕಡಬದ ಮುಳಿಮಜಲು ಎಂಬಲ್ಲಿ ವಿದ್ಯುತ್ ಪೂರೈಕೆಯಲ್ಲಿ ಸಮಸ್ಯೆಯನ್ನು ಕಂಡು ಕಂಬವೇರಿದ್ದ ಲೈನ್ ಮ್ಯಾನ್ ದ್ಯಾಮಣ್ಣರಿಗೆ ವಿದ್ಯುತ್ ಶಾಕ್ ಹೊಡೆದಿದೆ ಎನ್ನಲಾಗಿದೆ.

ಕಂಬದಲ್ಲೇ ಕೆಲಕಾಲ ಬಾಕಿಯಾಗಿದ್ದ ಅವರಿಗೆ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯಲಾಯಿತಾದರೂ ಅದಾಗಲೇ ಮೃತಪಟ್ಟ ಬಗ್ಗೆ ವರದಿಯಾಗಿದೆ.


Spread the love