ಕದ್ರಿ ದೇವಳದಲ್ಲಿ ಅನುಮಾಸ್ಪದವಾಗಿ ಸುತ್ತಾಡುತ್ತಿದ್ದ ಮೂವರ ಬಂಧನ

Spread the love

ಕದ್ರಿ ದೇವಳದಲ್ಲಿ ಅನುಮಾಸ್ಪದವಾಗಿ ಸುತ್ತಾಡುತ್ತಿದ್ದ ಮೂವರ ಬಂಧನ

ಮಂಗಳೂರು: ಕದ್ರಿ ದೇವಾಲಯ ವ್ಯಾಪ್ತಿಯಲ್ಲಿ ಅನುಮಾಸ್ಪದವಾಗಿ ಸುತ್ತಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಅಸೈಗೋಳಿ ನಿವಾಸಿಗಳಾದ ಹಸನ್ ಶಾಹಿನ್ ( 19 ವರ್ಷ), ಉಮ್ಮರ್ ಫಾರೂಕ್ (21 ವರ್ಷ), ಮಹಮ್ಮದ್ ಜಾಫರ್ (18 ವರ್ಷ) ಎಂದು ಗುರುತಿಸಲಾಗಿದೆ.

ಮೇ 11 ರಂದು ರಾತ್ರಿ 10 ಗಂಟೆಗೆ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದ ಅಂಗಣಕ್ಕೆ ಸ್ಲ್ಪೆಂಡರ್ ಬೈಕ್ ನಲ್ಲಿ ಅಕ್ರಮವಾಗಿ ಪ್ರವೇಶಿಸಿ ಅಂಗಣದಲ್ಲಿ ಸುತ್ತಾಡುತ್ತಿದ್ದವರನ್ನು ಸಂಶಯಗೊಂಡು ದೇವಾಲಯದ ಸಿಬ್ಬಂದಿಗಳು ವಿಚಾರಿಸಿದಾಗ ಸಮರ್ಪಕವಾದ ಉತ್ತರವನ್ನು ನೀಡದೇ ಇದ್ದು, ಭದ್ರತಾ ಸಿಬ್ಬಂದಿಯವರಿಗೆ ಅವಾಚ್ಯ ಶಬ್ದಗಳಿಂದ ಬೈಯ್ದು ಬೆದರಿಕೆ ಹಾಕಿದ್ದು ಈ ಬಗ್ಗೆ ದೇವಾಲಯದ ವ್ಯವಸ್ಥಾಪನ ಸಮಿತಿಯವರು ನೀಡಿದ ದೂರಿನಂತೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕ್ರಮ ಕೈಗೊಂಡು, ಮೂವರನ್ನು ಬಂಧಿಸಿದ್ದಾರೆ.

ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.


Spread the love

Leave a Reply

Please enter your comment!
Please enter your name here