Home Mangalorean News Kannada News ಕನ್ನಡ ಚಿತ್ರ ರಂಗದ ಹಿರಿಯ ಪೋಷಕ ನಟ ಮಂಗಳೂರು ದಿನೇಶ್ ನಿಧನ

ಕನ್ನಡ ಚಿತ್ರ ರಂಗದ ಹಿರಿಯ ಪೋಷಕ ನಟ ಮಂಗಳೂರು ದಿನೇಶ್ ನಿಧನ

Spread the love

ಕನ್ನಡ ಚಿತ್ರ ರಂಗದ ಹಿರಿಯ ಪೋಷಕ ನಟ ಮಂಗಳೂರು ದಿನೇಶ್ ನಿಧನ

ಕುಂದಾಪುರ: ಕನ್ನಡ ಚಿತ್ರ ರಂಗದ ಹಿರಿಯ ಪೋಷಕ ನಟ ಮಂಗಳೂರು ದಿನೇಶ್ ಅವರು ಕುಂದಾಪುರದಲ್ಲಿರುವ ತಮ್ಮ ಸ್ವಗೃಹದಲ್ಲಿ ಸೋಮವಾರ ನಿಧನರಾಗಿದ್ದಾರೆ.

ಕೆಜಿಎಫ್ ಬಾಂಬೆ ಡಾನ್ ಪಾತ್ರದಲ್ಲಿ ನಟಿಸಿದ್ದ ದಿನೇಶ್ ಅವರು ರಿಕ್ಕಿ, ಹರಿಕಥೆ ಅಲ್ಲ ಗಿರಿಕಥೆ, ಉಳಿದವರು ಕಂಡಂತೆ ಸೇರಿದಂತೆ ಹಲವು ಸಿನಿಮಾಗಳಲ್ಲಿ ಪೋಷಕ ನಟರಾಗಿ ಅಭಿನಯಿಸಿದ್ದರು.

‘ಆ ದಿನಗಳು’, ‘ಕೆಜಿಎಫ್’ (KGF), ‘ಉಳಿದವರು ಕಂಡಂತೆ’, ‘ಕಿಚ್ಚ’, ‘ಕಿರಿಕ್ ಪಾರ್ಟಿ’ ಮುಂತಾದ ಸಿನಿಮಾಗಳಲ್ಲಿ ದಿನೇಶ್ ಮಂಗಳೂರು ಅವರು ನಟಿಸಿದ್ದರು. ಕನ್ನಡ ಚಿತ್ರರಂಗದಲ್ಲಿ ಅವರು ಬಹುಬೇಡಿಕೆಯ ಪೋಷಕ ನಟನಾಗಿ ಅವರು ಗುರುತಿಸಿಕೊಂಡಿದ್ದರು.

ಬಣ್ಣದ ಲೋಕದಲ್ಲಿ ದಿನೇಶ್ ಮಂಗಳೂರು ಅವರು ಅಪಾರ ಅನುಭವ ಹೊಂದಿದ್ದರು. ‘ಕಾಂತಾರ’ ಚಿತ್ರದ ಶೂಟಿಂಗ್ ವೇಳೆ ಅವರಿಗೆ ಪಾರ್ಶ್ವವಾಯು ಆಗಿತ್ತು. ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಆದರೆ ಒಂದು ವಾರದ ಹಿಂದೆ ಅವರು ಮತ್ತೆ ಅಸ್ವಸ್ಥರಾಗಿದ್ದರು. ಅಂಕದಕಟ್ಟೆ ಸರ್ಜನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ನಟ ಮಂಗಳೂರು ದಿನೇಶ್ ಮರಣ ಹೊಂದಿದ್ದಾರೆ.


Spread the love

Exit mobile version