ಕನ್ನಡ ಸಿನಿಮಾ ರಂಗದ ಹೆಸರಾಂತ ನಟಿ ಲೀಲಾವತಿ ನಿಧನ

Spread the love

ಕನ್ನಡ ಸಿನಿಮಾ ರಂಗದ ಹೆಸರಾಂತ ನಟಿ ಲೀಲಾವತಿ ನಿಧನ

ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ಶುಕ್ರವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅವರ ಆರೋಗ್ಯದಲ್ಲಿ ಮತ್ತೆ ಸಮಸ್ಯೆ ಕಾಣಿಸಿಕೊಂಡಿದ್ದರ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಎರಡು ದಿನಗಳಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತು. ಶುಕ್ರವಾರ ಮಧ್ಯಾಹ್ನ ದಿಢೀರ್ ಅಂತ ಲೋ ಬಿಪಿ ಸಮಸ್ಯೆ ಶುರುವಾಗಿದ್ದರ ಹಿನ್ನಲೆಯಲ್ಲಿ ತಕ್ಷಣವೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಲೀಲಾವತಿ ನಿಧನರಾಗಿದ್ದಾರೆ.

ಲೀಲಾವತಿ ಅವರು ಕೆಲವು ದಿನಗಳಿಂದ ಅನಾರೋಗ್ಯ ಕಾರಣದಿಂದಾಗಿ ಹಾಸಿಗೆ ಹಿಡಿದಿದ್ದರು. ಅವರ ಆರೋಗ್ಯ ಯೋಗ ಕ್ಷೇಮ ವಿಚಾರಿಸಲು ಖುದ್ದು ಸಿಎಂ ಸಿದ್ದರಾಮಯ್ಯ ನಟಿ ಲೀಲಾವತಿ ಮನೆಗೆ ಭೇಟಿ ನೀಡಿದ್ದರು.

87 ವರ್ಷದ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ನಟ ದರ್ಶನ್, ಗಿರಿಜಾ ಲೋಕೇಶ್ ಸೇರಿದಂತೆ ಅನೇಕರು ಆಗಮಿಸಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಕೂಡ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ತೋಟ ಮನೆಗೆ ಭೇಟಿ ನೀಡಿ ಲೀಲಾವತಿ ಅವರ ಆರೋಗ್ಯ ವಿಚಾರಿಸಿದ್ದರು.


Spread the love