ಕಬಕದಲ್ಲಿ ಸಾವರ್ಕರ್ ಫೋಟೊ ಇದ್ದ ವಾಹನವನ್ನು ತಡೆದ ಆರೋಪ: ಮೂವರ ಬಂಧನ

Spread the love

ಕಬಕದಲ್ಲಿ ಸಾವರ್ಕರ್ ಫೋಟೊ ಇದ್ದ ವಾಹನವನ್ನು ತಡೆದ ಆರೋಪ: ಮೂವರ ಬಂಧನ

ಪುತ್ತೂರು: ಕಬಕ ಗ್ರಾಮ ಪಂಚಾಯತ್ ವತಿಯಿಂದ ಸಿದ್ಧಪಡಿಸಿದ್ದ ಸ್ವಾತಂತ್ರ್ಯ ಉತ್ಸವದ ರಥದಲ್ಲಿ ಸಾವರ್ಕರ್ ಫೋಟೊ ಅಳವಡಿಸಿರುವುದನ್ನು ವಿರೋಧಿಸಿ ತಡೆ ಒಡ್ಡಿದ ಘಟನೆ ಸಂಬಂಧಿಸಿ ಮೂವರನ್ನು ಪೊಲೀಸರು ಬಂಧಿಸಿದ್ದು, ಆರೋಪಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಕಬಕ ನಿವಾಸಿಗಳಾದ ಅಝೀಝ್, ಶಬೀರ್ ಮತ್ತು ಕೊಡಿಪ್ಪಾಡಿ ನಿವಾಸಿ ಅಬ್ದುಲ್ ರಹ್ಮಾನ್ ಬಂಧಿತರು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರನ್ನು ರವಿವಾರ ಸಂಜೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿದ್ದು, ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love