ಕಮಲಶಿಲೆ ದೇವಳಕ್ಕೆ ರವಿಶಂಕರ್ ಗುರೂಜಿ ಭೇಟಿ

Spread the love

ಕಮಲಶಿಲೆ ದೇವಳಕ್ಕೆ ರವಿಶಂಕರ್ ಗುರೂಜಿ ಭೇಟಿ

ಕುಂದಾಪುರ : ಇಲ್ಲಿಗೆ ಸಮೀಪದ ಕಮಲಶಿಲೆಯ ಬ್ರಾಹ್ಮೀ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮಂಗಳವಾರ ರಾತ್ರಿ ಭೇಟಿ ನೀಡಿದ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ರವಿಶಂಕರ್ ಗುರೂಜಿ ಅವರನ್ನು ದೇವಸ್ಥಾನದ ಅನುವಂಶೀಕ ಆಡಳಿತ ಧರ್ಮದರ್ಶಿ ಎಸ್. ಸಚ್ಚಿದಾನಂದ ಚಾತ್ರ ಗೌರವಿಸಿದರು. ದೇಗುಲದ ವ್ಯವಸ್ಥಾಪಕ ಗುರುರಾಜ್ ಭಟ್ ಇದ್ದರು.

ಕಮಲಶಿಲೆ ದೇವಸ್ಥಾನದಲ್ಲಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ರವಿಶಂಕರ್ ಗುರೂಜಿ ಬುಧವಾರ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಶ್ರೀ ದೇವಿಯ ದರ್ಶನ ಪಡೆದು, ಚಂಡಿಕಾ ಹೋಮದಲ್ಲಿ ಭಾಗಿಯಾಗಿದ್ದರು.


Spread the love