ಕಮಿಷನರೇಟ್ ವ್ಯಾಪ್ತಿ ಹೊರತುಪಡಿಸಿ ಸುಡುಮದ್ದು ಮಾರಾಟದ ತಾತ್ಕಾಲಿಕ ಪರವಾನಿಗೆ – ಅರ್ಜಿ ಆಹ್ವಾನ

Spread the love

ಕಮಿಷನರೇಟ್ ವ್ಯಾಪ್ತಿ ಹೊರತುಪಡಿಸಿ ಸುಡುಮದ್ದು ಮಾರಾಟದ ತಾತ್ಕಾಲಿಕ ಪರವಾನಿಗೆ – ಅರ್ಜಿ ಆಹ್ವಾನ

ಮಂಗಳೂರು : ಮಂಗಳೂರು ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ ಸ್ಪೋಟಕ ಕಾಯಿದೆ ಮತ್ತು ನಿಯಮದಡಿ ಮೈದಾನದಲ್ಲಿ, ತೆರೆದ ಪ್ರದೇಶದಲ್ಲಿ ಹಬ್ಬಗಳ ನಿಮಿತ್ತ ಸುಡುಮದ್ದು ಮಾರಾಟದ ತಾತ್ಕಾಲಿಕ ಪರವಾನಿಗೆ ನೀಡುವ ಬಗ್ಗೆ ಅರ್ಜಿಗಳನ್ನು ಈಗಾಗಲೇ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಸ್ವೀಕರಿಸಲಾಗುತ್ತಿದ್ದು, ಪರವಾನಿಗೆ ಪಡೆಯ ಬಯಸುವವರು ಅರ್ಜಿಯನ್ನು ನವೆಂಬರ್ 2 ರೊಳಗೆ ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಬೇಕು.

ನಿಗದಿತ ನಮೂನೆ ಎಇ-5ರಲ್ಲಿ ಅರ್ಜಿ ಸಲ್ಲಿಸಬೇಕು, ಅರ್ಜಿಯೊಂದಿಗೆ ನಾಲ್ಕು ಪ್ರತಿ ತಾತ್ಕಾಲಿಕ ಅಂಗಡಿ ತೆರೆಯಲು ಉದ್ದೇಶಿಸಿರುವ ಸ್ಥಳದ ನೀಲ ನಕ್ಷೆ, ಎರಡು ಪ್ರತಿ ಅರ್ಜಿದಾರರ ಭಾವಚಿತ್ರ, ನಾಲ್ಕು ಪ್ರತಿ ಪ್ರಸ್ತಾವಿತ ಜಮೀನಿನ ಪಹಣಿ, ಸರ್ಕಾರಿ ಜಮೀನು ಅಲ್ಲದೇ ಇದ್ದಲ್ಲಿ ಜಮೀನಿನ ಮಾಲಕರ ಒಪ್ಪಿಗೆ ಪತ್ರ, ಜಮೀನು ಯಾವ ಇಲಾಖೆಯ ಸುಪರ್ದಿಯಲ್ಲಿದೆಯೋ ಆ ಇಲಾಖೆಯ ನಿರಾಕ್ಷೇಪಣಾ ಪತ್ರವನ್ನು ಸಲ್ಲಿಸಬೇಕು. ಸಂಬಂಧಪಟ್ಟ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ ಬಂದಲ್ಲಿ, ಸ್ಪೋಟಕ ಕಾಯಿದೆ, ನಿಯಮಾವಳಿಗಳಿಗೆ ಒಳಪಟ್ಟು ಮತ್ತು ಕೋವಿಡ್-19 ಸರ್ಕಾರಿ ಮಾರ್ಗಸೂಚಿಗಳನ್ನು ಪಾಲಿಸುವ ಷರತ್ತಿಗೊಳಪಡುವವರಿಗೆ ಮಾತ್ರ ಜಿಲ್ಲಾಧಿಕಾರಿ ಕಚೇರಿಯಿಂದ ಪರವಾನಿಗೆ ಮಂಜೂರು ಮಾಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love