ಕರಾವಳಿಯಲ್ಲಿ ಮುಂದುವರೆದ ಅನೈತಿಕ ಪೊಲೀಸ್ ಗಿರಿ – ವರದಿಗಾರನಿಗೆ ಇಬ್ಬರಿಂದ ಅವಾಚ್ಯವಾಗಿ ಬೈದು, ನಿಂದನೆ

Spread the love

ಕರಾವಳಿಯಲ್ಲಿ ಮುಂದುವರೆದ ಅನೈತಿಕ ಪೊಲೀಸ್ ಗಿರಿ – ವರದಿಗಾರನಿಗೆ ಇಬ್ಬರಿಂದ ಅವಾಚ್ಯವಾಗಿ ಬೈದು, ನಿಂದನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನೈತಿಕ ಪೊಲೀಸ್ ಗಿರಿ ಮೀತಿ ಮೀರಿ ಬೆಳೆಯುತ್ತಿದ್ದು ಎರಡು ದಿನಗಳ ಹಿಂದೆ ವಿಟ್ಲದಲ್ಲಿ ಪೊಲೀಸ್ ಸಿಬಂದಿಯನ್ನು ಅಡ್ಡಗಟ್ಟಿ ನಿಂದಿಸಿದ ಪ್ರಕರಣ ಮಾಸುವ ಮುನ್ನವೇ ನಗರದ ಯುವ ವರದಿಗಾರನೋರ್ವನನ್ನು ತಡೆದ ಧರ್ಮದ ಹೆಸರಿನಲ್ಲಿ ಅವಾಚ್ಯವಾಗಿ ನಿಂದಿಸಿದ ಪ್ರಕರಣ ಬೆಳಕಿಗೆ ಬಂದಿದೆ.

ನಗರದ ವೆಬ್ ಮಾಧ್ಯಮವೊಂದರ ಪತ್ರಕರ್ತರೋರ್ವರು ಜುಲೈ 26ರಂದು ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಕಾವೂರು ಜಂಕ್ಷನ್ ಬಳಿಯ ಹೋಟೆಲ್ ಒಂದರಲ್ಲಿ ತನ್ನ ಕಾಲೇಜಿನ ಸಹಪಾಠಿಯಾಗಿದ್ದ ಯುವತಿ ಜೊತೆ ಊಟ ಮುಗಿಸಿ ಹೊರ ಬರುತ್ತಿದ್ದಾಗ ಅಪರಿಚಿತರಿಬ್ಬರು ಪತ್ರಕರ್ತನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ತಿಳಿದು ಬಂದಿದೆ. ವರದಿಗಾರ ತಾನು ಮಾಧ್ಯಮದ ಐಡಿ ಕಾರ್ಡ್ ತೋರಿಸಿದ್ದರೂ ಕೂಡ ಮತ್ತೆ ಅವಾಚ್ಯ ಶಬ್ದಗಳಿಂದಿ ನಿಂದಿಸಿದ್ದಾರೆ.

ಈ ಬಗ್ಗೆ ಪತ್ರಕರ್ತ ಅದೇ ದಿನ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಈವೇಳೆ ದೂರಿನಲ್ಲಿ ನಿಂದಿಸಿದ್ದ ವ್ಯಕ್ತಿಯ ಕಾರಿನ ನಂಬರ್ ನಮೂದಿಸಿದ್ದರು. ನಗರ ಪೊಲೀಸ್ ಆಯುಕ್ತ ಕುಲದೀಪ್ ಆರ್ ಜೈನ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಅವರ ನಿರ್ದೇಶನದ ಮೇರೆಗೆ ಕಾವೂರು ಪೊಲೀಸರು ಕೋಟೆಕಾರ್ ನಿವಾಸಿ ಚೇತನ್ ಕುಮಾರ್ (38), ಯೆಯ್ಯಾಡಿ ನಿವಾಸಿ ನವೀನ್(39) ಎಂಬವರನ್ನು ಬಂಧಿಸಿದ್ದಾರೆ. ವಿಚಾರಣೆ ಬಳಕಿ ಆರೋಪಿಗಳನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ


Spread the love