ಕರಾವಳಿಯ ಎಲ್ಲಾ ಕಾಂಗ್ರೆಸ್ ಕ್ಷೇತ್ರಗಳಲ್ಲೂ ಗೆಲುವು: ಐವನ್ ಡಿಸೋಜ

ಕರಾವಳಿಯ ಎಲ್ಲಾ ಕಾಂಗ್ರೆಸ್ ಕ್ಷೇತ್ರಗಳಲ್ಲೂ ಗೆಲುವು: ಐವನ್ ಡಿಸೋಜ

ಕಾಪು: ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಎಜಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಕನಸು ರಾಜ್ಯದಲ್ಲಿ ನನಸಾಗುವುದಿಲ್ಲ ಎಂದು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ವಿಶ್ವಾಸ ಹೇಳಿದರು. ಕಾಪು ಪ್ರೆಸ್ ಕ್ಲಬ್‍ನಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಇದ್ದು, 130ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಜಯಗಳಿಸಲಿದೆ. ಕರಾವಳಿಯಲ್ಲಿ ಬಿಜೆಪಿಗೆ ಯಾವುದೇ ರೀತಿಯ ಬೆಂಬಲ ಇಲ್ಲ. ಅವರ ಕುಟಿಲ ತಂತ್ರ ಜನರಿಗೆ ಅರಿವಾಗಿದೆ. ಕರಾವಳಿಯಲ್ಲಿ ಕಾಂಗ್ರೆಸ್ ಪರ ಅಲೆ ಇದ್ದು, ಎಲ್ಲಾ 13ಕ್ಷೇತ್ರಗಳಲ್ಲೂ ಗೆಲುವು ಸಾಧಿಸಲಿದೆ ಎಂದರು.

ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ಜಾರಿಗೆ ತಂದ ಹಲವಾರು ಜನಪರ ಯೋಜನೆಗಳಿಂದಾಗಿ ಮತದಾರರು ಕಾಂಗ್ರೆಸ್ ಪರ ಒಳವು ತೋರಿದ್ದಾರೆ. ಇದರಿಂದಾಗಿ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ ಎಂಬುವುದು ಸರ್ವೇಗಳಿಂದ ತಿಳಿದಿದೆ. ಈ ನಿಟ್ಟಿನಲ್ಲಿ ಜೆಡಿಎಸ್‍ನೊಂದಿಗೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಪರವಾಗಿ ಚುನಾವಣೆ ಎದುರಿಸಲು ಬಿಜೆಪಿಗೆ ತಿಳಿದಿದೆ. ಅದಕ್ಕಾಗಿ ಬೇರೆ ಬೇರೆ ವಿಷಯಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುತಿದ್ದಾರೆ. ಮೋದಿ ಮತ್ತು ಶಾ ಅವರ ತಂತ್ರ ಇಲ್ಲಿ ನಡೆಯುವುದಿಲ್ಲ. ದೇಶದ ಬೇರೆ ರಾಜ್ಯಗಳಿಗೂ ಕರ್ನಾಟಕಕ್ಕೂ ವ್ಯತ್ಯಾಸ ಇದೆ ಎಂದರು.

ಯಡೊಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡುವುದಾಗಿ ಹೇಳಿಕೊಂಡಿದ್ದರು. ಆದರೆ ಈಗ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂಬುವುದು ಗೊತ್ತಾದ ಬಳಿಕ ರೆಡ್ಡಿ ಬ್ರದರ್ಸ್‍ನ್ನು ಸೇರಿಸಿಕೊಂಡು ಚುನಾವಣೆಯನ್ನು ಎದುರಿಸುಯತಿದ್ದಾರೆ ಎಂದ ಅವರು, ಸಿದ್ಧರಾಮಯ್ಯ ಅವರಿಗೆ 2-1 ಫಾರ್ಮುಲ ಹೇಳುತ್ತಾರೆ ಆದರೆ ಆದರೆ ಲೋಕಸಭಾ ಚುನಾವಣೆಯಲ್ಲಿ ಮೋದಿವರೇ ಎರಡು ಕಡೆಗಳಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಶ್ರೀರಾಮುಲು ಎರಡು ಕಡೆಗಳಲ್ಲಿ ಸ್ಪರ್ಧಿಸುತಿದ್ದಾರೆ. ಕುಮಾರ ಸ್ವಾಮಿ ಅವರು ಎರಡು ಕಡೆಗಳಲ್ಲಿ ಸ್ಪರ್ಧಿಸುತಿದ್ದಾರೆ. ಈಗ ಈ ಫಾರ್ಮುಲ ಎಲ್ಲಿ ಹೋಯಿತು ಎಂದು ಪ್ರಶ್ನಿಸಿದರು.

ಕೃಷ್ಣ ಮಠಕ್ಕೆ ಅವಮಾನ ಮಾಡಿದ ಶೋಭಾ: ಇತ್ತೀಚೆಗೆ ಉಡುಪಿಯ ಸಮಾವೇಶಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಧ್ರತೆ ಇಲ್ಲ ಎಂಬ ಹೇಳಿಕೆ ನೀಡಿರುವುದು ಉಡುಪಿಯ ಜನತೆಗೆ ಅದರಲ್ಲೂ ಕೃಷ್ಣ ಮಠಕ್ಕೆ ಮಾಡಿದ ಅವಮಾನ ಎಂದು ಐವನ್ ಡಿಸೋಜ ಹೇಳಿದರು.

ದೇವಸ್ಥಾನಕ್ಕೆ ಬರಲು ಭದ್ರತೆ ಬೇಕೆ. ಇಲ್ಲಿ ಅಂತಹ ಆಗಂತುಕರು ಯಾರಿದ್ದಾರೆ. ಪಾಕಿಸ್ಥಾನಕ್ಕೆ ಭದ್ರತೆ ಇಲ್ಲದೆ ತೆರಳುವ ಮೋದಿಯವರು ಉಡುಪಿಯ ದೇವಸ್ಥಾನಕ್ಕೆ ಬರುವಾಗ ಭದ್ರತೆ ಬೇಕೆ. ಪ್ರಧಾನಿ ಆಗಿ ಭದ್ರತೆ ಒದಗಿಸಲು ಸಾಧ್ಯವಾಗದೆ ಇದ್ದರೆ ಸಾಮಾನ್ಯರಿಗೆ ಹೇಗೆ ಭದ್ರತೆ ಒದಗಿಸಲು ಸಾಧ್ಯ ಎಂದು ಅವರು ಪ್ರಶ್ನಿಸಿದರು.

Notify of

Yenta maaraaya I 1?
Bendu mithai pandad yentaaraa?