ಕರಾವಳಿ ಅಭಿವೃದ್ದಿ ಪ್ರಾಧಿಕಾರದ ನೂತನ ಅಧ್ಯಕ್ಷರ ಪದಗ್ರಹಣ-ಸ್ಥಾನಕ್ಕೆ ತಕ್ಕ ನ್ಯಾಯ ದೊರಕಿಸಿಕೊಡುವೆ: ಚನಿಲ ತಿಮ್ಮಪ್ಪ ಶೆಟ್ಟಿ

Spread the love

ಕರಾವಳಿ ಅಭಿವೃದ್ದಿ ಪ್ರಾಧಿಕಾರದ ನೂತನ ಅಧ್ಯಕ್ಷರ ಪದಗ್ರಹಣ-ಸ್ಥಾನಕ್ಕೆ ತಕ್ಕ ನ್ಯಾಯ ದೊರಕಿಸಿಕೊಡುವೆ: ಚನಿಲ ತಿಮ್ಮಪ್ಪ ಶೆಟ್ಟಿ

ಮಂಗಳೂರು: ದೊರೆತ ಸ್ಥಾನಕ್ಕೆ ಉತ್ತಮವಾಗಿ ಕೆಲಸ ಮಾಡಿ ತಕ್ಕ ನ್ಯಾಯ ಒದಗಿಸುವ ಯತ್ನ ಮಾಡುವುದಾಗಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಅವರು ತಿಳಿಸಿದರು.

ಅವರು ನ.10ರ ಗುರುವಾರ ನಗರದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿ ನಂತರ ಪತ್ರಕರ್ತರೊಂದಿಗೆ ಮಾತನಾಡಿದರು.

ಸರ್ಕಾರ ನನ್ನ ಮೇಲೆ ನಂಬಿಕೆಯಿರಿಸಿ ದೊಡ್ಡ ಜವಾಬ್ದಾರಿ ನೀಡಿದೆ, ಅದಕ್ಕೆ ಸಂತಸವಿದ್ದು, ಹುದ್ದೆಯ ಸ್ಥಾನಕ್ಕೆ ತಕ್ಕ ನ್ಯಾಯ ದೊರಕಿಸಲು ನಾನು ಶ್ರಮಿಸುತ್ತೇನೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಈಗಾಗಲೇ ಮಟ್ಟಾರು ರತ್ನಾಕರ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ಮೂರು ಜಿಲ್ಲೆಗಳಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಆರಂಭಿಸಿದೆ, ಜನ ಪ್ರತಿನಿಧಿಗಳೊಂದಿಗೆ ಚರ್ಚಿಸಿ ಆದಷ್ಟು ಬೇಗ ಅವುಗಳನ್ನು ಪೂರ್ಣಗೊಳಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಮುಖಂಡರಾದ ಸಂತೋμï ಬೋಳಿಯಾರ್, ಪುತ್ತೂರು ನಗರ ಸಭಾ ಅಧ್ಯಕ್ಷೆ ಇಂದಿರಾ .ಎಸ್., ಉಪಾಧ್ಯಕ್ಷೆ ಪರಮೇಶ್ವರಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರದೀಪ್ ಡಿ’ಸೋಜ ಹಾಗೂ ಇತರೆ ಜನ ಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

Leave a Reply

Please enter your comment!
Please enter your name here