ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆ ಸಂಭವ, ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

Spread the love

ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆ ಸಂಭವ, ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಈಗಾಗಲೇ ಧಾರಾಕಾರ ಮಳೆಯಾಗುತ್ತಿದ್ದು, ಬಿರುಗಾಳಿ, ಗುಡುಗು ಸಹಿತ ನಾಳೆ ಮಳೆಯ ಪ್ರಮಾಣ ಇನ್ನೂ ಹೆಚ್ಚಾಗಲಿರುವ ಕಾರಣ ಹವಾಮಾನ ಇಲಾಖೆ ಬೆಂಗಳೂರು, ರೆಡ್ ಅಲರ್ಟ್ ಘೋಷಿಸಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಜುಲೈ 25 ರಂದು, 204.5 ಮಿ.ಮೀ ಗಿಂತಲೂ ಹೆಚ್ಚು ಅತೀ ಭಾರೀ ಮಳೆಯಾಗುವ ಸಾಧ್ಯತೆ ಇರುವ ಕಾರಣ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಈ ಮೂರೂ ಜಿಲ್ಲೆಗಳಿಗೂ ಬುಧವಾರ ಹಾಗೂ ಗುರುವಾರವೂ ಭಾರೀ ಮಳೆ ಮುಂದುವರಿಯಲಿರುವ ಕಾರಣ ಆರೆಂಜ್ ಅಲರ್ಟ್ ನೀಡಲಾಗಿದೆ. ಜುಲೈ 28 ಹಾಗೂ 29 ರಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ.


Spread the love