ಕರಾವಳಿ ಜಿಲ್ಲೆಗಳ ಪಾಲಿಗೆ ಕುರುಡು ಬಜೆಟ್ ಮಂಡಿಸಿದ ಸಿದ್ದರಾಮಯ್ಯ : ಯಶ್ಪಾಲ್ ಸುವರ್ಣ

Spread the love

ಕರಾವಳಿ ಜಿಲ್ಲೆಗಳ ಪಾಲಿಗೆ ಕುರುಡು ಬಜೆಟ್ ಮಂಡಿಸಿದ ಸಿದ್ದರಾಮಯ್ಯ : ಯಶ್ಪಾಲ್ ಸುವರ್ಣ

ಉಡುಪಿ: ಸಿದ್ದರಾಮಯ್ಯ ಸರಕಾರದ ಇಂದಿನ ಬಜೆಟ್ ನಲ್ಲಿ ಕರಾವಳಿ ಜಿಲ್ಲೆಗಳನ್ನು ಸಂಪೂರ್ಣವಾಗಿ ಕಡೆಗಣಿಸಿ ಕುರುಡು ನೀತಿಯ ಬಜೆಟ್ ಮಂಡಿಸಿ ಕರಾವಳಿ ಜಿಲ್ಲೆಯನ್ನು ಸದಾ ನಿರ್ಲಕ್ಷಿಸುವ ತನ್ನ ಧೋರಣೆಯನ್ನು ಈ ಬಾರಿಯೂ ಮುಂದುವರಿಸಿದ್ದಾರೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯ ಮೀನುಗಾರಿಕೆ ಬಂದರುಗಳ ಅಭಿವೃದ್ದಿ ಯೋಜನೆ, ಸರಕಾರಿ ಮೆಡಿಕಲ್ ಕಾಲೇಜು,ಯುವ ಜನತೆಗೆ ಉದ್ಯೋಗ ಸೃಷ್ಟಿ, ಗ್ರಾಮಾಂತರ ಭಾಗದಲ್ಲಿ ಸರಕಾರಿ ಬಸ್ಸು ಸೇವೆ ಹೆಚ್ಚಳ ಸಹಿತ ಜನತೆಯ ಯಾವುದೇ ಬೇಡಿಕೆಗಳ ಈಡೇರಿಕೆ ಬಗ್ಗೆ ಬಜೆಟ್ ನಲ್ಲಿ ಘೋಷಣೆ ಮಾಡಿಲ್ಲ.

ಮೀನುಗಾರಿಕೆ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯ 3,000 ಕೋಟಿ ಅನುದಾನವನ್ನು ತನ್ನದೇ ಅನುದಾನ ಎಂದು ಘೋಷಿಸುವ ಮೂಲಕ ಮೀನುಗಾರರಿಗೆ ತಪ್ಪು ಮಾಹಿತಿ ನೀಡಲು ಮುಂದಾಗಿರುವುದು ದುರದೃಷ್ಟಕರ

ಗ್ಯಾರಂಟಿ ಯೋಜನೆಗಳ ಹೊರೆಯಿಂದ ಪಾರಾಗಲು ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಮೂಲಭೂತ ಸೌಕರ್ಯಗಳ ಯೋಜನೆಗೆ ತಿಲಾಂಜಲಿ ನೀಡಿ ರಾಜ್ಯದ ಆರ್ಥಿಕ ವ್ಯವಸ್ಥೆಯ ಹಳಿ ತಪ್ಪಿಸಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love