ಕರಾವಳಿ ಮೀನುಗಾರರ ಕ್ರಿಯಾಸಮಿತಿ ನಿಯೋಗದಿಂದ ಕೇಂದ್ರ ಸಚಿವರ ಭೇಟಿ

Spread the love

ಕರಾವಳಿ ಮೀನುಗಾರರ ಕ್ರಿಯಾಸಮಿತಿ ನಿಯೋಗದಿಂದ ಕೇಂದ್ರ ಸಚಿವರ ಭೇಟಿ

ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷರೂ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ  ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಕರ್ನಾಟಕ ಕರಾವಳಿ ಮೀನುಗಾರರ ಕ್ರಿಯಾ ಸಮಿತಿ ನಿಯೋಗ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ  ಬಿ. ಎಲ್. ಸಂತೋಷ್ ಜೀ ಹಾಗೂ ಕೇಂದ್ರ ಸರ್ಕಾರದ ಮೀನುಗಾರಿಕೆ ಮತ್ತು ಪಶುಸಂಗೋಪನೆ ಇಲಾಖೆ ಸಚಿವರಾದ  ಪರ್ಶೋತ್ತಮ್ ರೂಪಾಲ ರವರನ್ನು ದೆಹಲಿಯಲ್ಲಿ ಭೇಟಿಯಾಗಿ ಕರಾವಳಿ ಕರ್ನಾಟಕದ ಮೀನುಗಾರರ ವಿವಿಧ ಬೇಡಿಕೆಗಳ ಬಗ್ಗೆ ಮನವಿ ಸಲ್ಲಿಸಿದರು.

 ನಿಯೋಗದ ಮನವಿಗೆ ಸ್ಪಂದಿಸಿದ ಸಚಿವರು ಶೀಘ್ರವಾಗಿ ಇಲಾಖೆಯ ಮೂಲಕ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ನಿಯೋಗದಲ್ಲಿ ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ  ದಯಾನಂದ ಕೆ. ಸುವರ್ಣ, ಗುಜರಾತ್ ರಾಜ್ಯ ಮೀನುಗಾರ ಮುಖಂಡರಾದ  ವೆಲ್ಜಿಭಾಯಿ ಕೆ. ಮಸಾನಿ, ಕರ್ನಾಟಕ ಕರಾವಳಿ ಮೀನುಗಾರರ ಕ್ರಿಯಾ ಸಮಿತಿಯ ಉಪಾಧ್ಯಕ್ಷರಾದ  ರಾಮಚಂದ್ರ ಕುಂದರ್, ಕೋಶಾಧಿಕಾರಿ  ಸೋಮನಾಥ ಕಾಂಚನ್, ಸಲಹೆಗಾರರಾದ   ಸತೀಶ್ ಕುಂದರ್ ಉಪಸ್ಥಿತರಿದ್ದರು.

Spread the love