ಕರ್ನಾಟಕದಲ್ಲೂ ಬಿಜೆಪಿ ಅಧಿಕಾರ ಪಡೆಯಲಿದೆ :ಸಂಸದ ನಳಿನ್‍ಕುಮಾರ್ ಕಟೀಲ್ ವಿಶ್ವಾಸ

Spread the love

ಕರ್ನಾಟಕದಲ್ಲೂ ಬಿಜೆಪಿ ಅಧಿಕಾರ ಪಡೆಯಲಿದೆ :ಸಂಸದ ನಳಿನ್‍ಕುಮಾರ್ ಕಟೀಲ್ ವಿಶ್ವಾಸ

ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಚುನಾವಣೆಯಲ್ಲಿ ಅರ್ಹ ಜಯ ದೊರೆತಿದೆ. ಮುಂದಿನ ವರ್ಷ ಕರ್ನಾಟಕದಲ್ಲೂ ಇದೇ ಫಲಿತಾಂಶ ಬರಲಿದ್ದು, ರಾಜ್ಯದಲ್ಲಿ ಬಿಜೆಪಿ ಅಧಿಕಾರ ಪಡೆಯುವುದು ನಿಶ್ಚಿತ ಎಂದು ಸಂಸದ ನಳಿನ್‍ಕುಮಾರ್ ಕಟೀಲ್ ಹೇಳಿದ್ದಾರೆ.

ಕೇಂದ್ರ ಹಾಗೂ ಗುಜರಾತ್‍ನಲ್ಲಿ ಬಿಜೆಪಿ ಸರ್ಕಾರ ನೀಡಿದ ಸ್ವಚ್ಛ, ಜನಪರ ಆಡಳಿತದ ಪರವಾಗಿ ಮತದಾರರು ತೀರ್ಪು ನೀಡಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಬದಲಾವಣೆ ಬಯಸಿದ ಜನತೆ ಮತ್ತೆ ಬಿಜೆಪಿಯನ್ನು ಆಯ್ಕೆ ಮಾಡಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ದುರಾಡಳಿತದಿಂದ ಜನತೆ ರೋಸಿ ಹೋಗಿದ್ದು, ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಫಲಿತಾಂಶ ರಾಜ್ಯ ಬಿಜೆಪಿಗೆ ಇನ್ನಷ್ಟು ಸ್ಪೂರ್ತಿ ನೀಡಿದೆ ಎಂದು ಸಂಸದರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love