ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Spread the love

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್ ಮತ್ತು ಪಾರ್ಸಿ ಜನಾಂಗದವರಿಂದ ನೇರಸಾಲ ಹಾಗೂ ಗಂಗಾಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು ವೆಬ್‌ಸೈಟ್ https://kmdconline.karnataka.gov.in  ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ನವೆಂಬರ್ 15 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574990, ಸಹಾಯವಾಣಿ ಸಂಖ್ಯೆ: 8277799990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕಾರ್ಕಳ ದೂ.ಸಂಖ್ಯೆ : 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

Leave a Reply

Please enter your comment!
Please enter your name here