ಕರ್ನಾಟಕ ಚುನಾವಣೆಗೆ ಗುಜರಾತ್ ಗೆಲುವು ಮಾದರಿ – ಕೇಸರಿ ಯುವರಾಜ್

Spread the love

ಕರ್ನಾಟಕ ಚುನಾವಣೆಗೆ ಗುಜರಾತ್ ಗೆಲುವು ಮಾದರಿ – ಕೇಸರಿ ಯುವರಾಜ್

ಉಡುಪಿ: ಗುಜರಾತ್ ಚುನಾವಣೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ನಾಯಕತ್ವದಲ್ಲಿ ತವರು ಊರಿನಲ್ಲಿ ದಾಖಲೆ ಗೆಲುವು ಸಾಧಿಸಿದ್ದು ಇದು ಮುಂದಿನ ಕರ್ನಾಟಕದ ಚುನಾವಣೆಯಲ್ಲಿ ಪ್ರಭಾವ ಬೀರಿ ಮತ್ತೊಮ್ಮೆ ಕರ್ನಾಟಕ ದಲ್ಲಿ ಬಿಜೆಪಿ ಪರ್ವ ಆರಂಭವಾಗಲಿದೆ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರ ದ ಸದಸ್ಯರಾದ ಕೇಸರಿ ಯುವರಾಜ್ ಹೇಳಿದ್ದಾರೆ.

ಬಿಜೆಪಿ ಗೆಲುವಿನ ಪರಿಣಾಮ ಸಕಾರಾತ್ಮಕವಾಗಿ ಕರ್ನಾಟಕದ ಚುನಾವಣೆಯ ಮೇಲೆ ಆಗಿಯೇ ಆಗುತ್ತದೆ. ಭಾಜಪ ಕಾರ್ಯಕರ್ತರು ಹಾಗೂ ಬೆಂಬಲಿಗರಿಗೆ ದೊಡ್ಡ ನೈತಿಕ ಬಲ ಸಿಗಲಿದೆ. ಗುಜರಾತ್ ಜನತೆ ನರೇಂದ್ರ ಮೋದಿಯವರ ಸಕಾರಾತ್ಮಕ ನಾಯಕತ್ವ ಸುಮಾರು ಒಂದು ತಲೆಮಾರು ದಾಟಿದರೂ ಹಳೆ ಮತ್ತು ಹೊಸ ಪೀಳಿಗೆ ಅವರ ಆಡಳಿತ, ದಕ್ಷತೆಯನ್ನು ಒಪ್ಪಿದ್ದಾರೆ. ದೇಶ ಮುನ್ನಡೆಸುವ ಶಕ್ತಿಯ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಅದೇ ರೀತಿಯ ಫಲಿತಾಂಶ ಮುಂದಿನ ಕರ್ನಾಟಕ ಚುನಾವಣೆಯಲ್ಲಿ ಪ್ರತಿಧ್ವನಿಸಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love