ಕರ್ನಾಟಕ ವಿಧಾನಸಭಾ ಚುನಾವಣೆ: ಬಿಜೆಪಿ ಪ್ರಭಾರಿಯಾಗಿ ಪ್ರಧಾನ್, ಸಹ ಪ್ರಭಾರಿ ಅಣ್ಣಾಮಲೈ

K. Annamalai.(photo:Facebook)
Spread the love

ಕರ್ನಾಟಕ ವಿಧಾನಸಭಾ ಚುನಾವಣೆ: ಬಿಜೆಪಿ ಪ್ರಭಾರಿಯಾಗಿ ಪ್ರಧಾನ್, ಸಹ ಪ್ರಭಾರಿ ಅಣ್ಣಾಮಲೈ

ಬೆಂಗಳೂರು : 2023 ರಲ್ಲಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಏರಲು ಭಾರಿ ಸಿದ್ಧತೆ ನಡೆಸಿರುವ ಬಿಜೆಪಿ ಚುನಾವಣಾ ಪ್ರಭಾರಿ ಮತ್ತು ಸಹ ಪ್ರಭಾರಿಗಳಾಗಿ ಪ್ರಬಲ ನಾಯಕರನ್ನು ನೇಮಕ ಮಾಡಿದೆ.

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರು ಶನಿವಾರ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಚುನಾವಣಾ ಉಸ್ತುವಾರಿಯಾಗಿ ನೇಮಿಸಿದ್ದು, ಬಿಜೆಪಿ ತಮಿಳುನಾಡು ರಾಜ್ಯಾಧ್ಯಕ್ಷ ಮತ್ತು ಕರ್ನಾಟಕದಲ್ಲಿ ಚಿರಪರಿಚಿತ ಮುಖ ಮಾಜಿ ಪೊಲೀಸ್ ಅಧಿಕಾರಿ, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಅವರನ್ನು ಸಹ-ಪ್ರಭಾರಿಯಾಗಿ ನೇಮಿಸಿದ್ದಾರೆ.


Spread the love