ಕರ್ನಾಟಕ ಸಿಎಂ: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಸಿದ್ದರಾಮಯ್ಯ ಆಯ್ಕೆ

Spread the love

ಕರ್ನಾಟಕ ಸಿಎಂ: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಸಿದ್ದರಾಮಯ್ಯ ಆಯ್ಕೆ

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಕಗ್ಗಂಟಾಗಿದ್ದ ಕರ್ನಾಟಕ ಸಿಎಂ ಆಯ್ಕೆ ವಿಚಾರ ಪರಿಹಾರವಾದ ಬೆನ್ನಲ್ಲೇ ಇಂದು ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಕೆಪಿಸಿಸಿ ಕಚೇರಿಯ ಇಂದಿರಾ ಗಾಂಧಿ ಸಭಾ ಭವನದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು, ಸಭೆಯಲ್ಲಿ ಸಿದ್ದರಾಮಯ್ಯ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ ಹೆಸರನ್ನು ಪ್ರಸ್ತಾಪಿಸಿದರು. ಇದಕ್ಕೆ ಶಾಸಕರೆಲ್ಲರೂ ಸಹಮತ ಸೂಚಿಸಿದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದರು.

ಕೇವಲ 25 ನಿಮಿಷ ಸಭೆ ನಡೆಸಲಾಯಿತು. ಬಳಿಕ ಕಾಂಗ್ರೆಸ್ ನಾಯಕರು ರಾಜಭವನಕ್ಕೆ ತೆರಳಿ ಸರ್ಕಾರ ರಚನೆಗೆ ಅಧಿಕೃತವಾಗಿ ರಾಜ್ಯಪಾಲರಿಗೆ ಮನವಿ ಮಾಡಿದರು.

ಇನ್ನು ಇಂದು ನಡೆದ ಸಿಎಲ್ ಪಿ ಸಭೆಯಲ್ಲಿ ಎಐಸಿಸಿ ವೀಕ್ಷಕರಾದ ಸುಶೀಲ್ ಕುಮಾರ್​ ಶಿಂಧೆ, ಜಿತೇಂದ್ರ ಸಿಂಗ್, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಹಲವು ಶಾಸಕರು ಭಾಗಿಯಾಗಿದ್ದರು.

ವಾಸ್ತು ಪ್ರಕಾರ ಪ್ರತ್ಯೇಕವಾಗಿ ಶಾಸಕಾಂಗ ಸಭೆಗೆ ಎಂಟ್ರಿ ಆದ ಡಿಕೆಶಿ
ಕಾಂಗ್ರೆಸ್ ಶಾಸಕಾಂಗ ಸಭೆಗೆ ಪ್ರತ್ಯೇಕ ದ್ವಾರದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಆಗಮಿಸಿದ್ದಾರೆ. ವಾಸ್ತು ಪ್ರಕಾರ ಕೆಪಿಸಿಸಿ ಕಛೇರಿಯ ಎಡಬಾಗದಲ್ಲಿ ಪ್ರತ್ಯೇಕ ದ್ವಾರದಲ್ಲಿ ಡಿಕೆಶಿವಕುಮಾರ್ ಎಂಟ್ರಿಕೊಟ್ಟರೆ, ಎಲ್ಲಾ ಶಾಸಕರು ಬಂದ ಇಂದಿರಾಗಾಂಧಿ ಸಭಾಂಗಣದ ದ್ವಾರದಿಂದ ಸಿದ್ದರಾಮಯ್ಯ ಪ್ರವೇಶ ಮಾಡಿದರು. ಡಿಕೆಶಿ ಆಗಮನಕ್ಕೆ ಪೊಲೀಸರು ಬ್ಯಾರಿಗೇಡ್ ಹಾಕಿ ಪ್ರತ್ಯೇಕ ವ್ಯವಸ್ಥೆ ಮಾಡಿದ್ದರು.

ಸಚಿವ ಸಂಪುಟ ರಚನೆ: ನಾಳೆ ಸಿದ್ದರಾಮಯ್ಯ ದೆಹಲಿಗೆ
ನಾಳೆ ಸಿದ್ದರಾಮಯ್ಯ ಅವರು ಸಂಭಾವ್ಯ ಸಚಿವರ ಪಟ್ಟಿ ಜತೆ ದೆಹಲಿಗೆ ತೆರಳಲಿದ್ದಾರೆ. ಬೆಳಗ್ಗೆ 9 ಗಂಟೆಗೆ ನವದೆಹಲಿಗೆ ತೆರಳಲಿದ್ದು, ಕಾಂಗ್ರೆಸ್ ಹೈಕಮಾಂಡ್ ಅನುಮೋದನೆ ಪಡೆದು ಸಂಪುಟ ರಚನೆ ನಡೆಸಲಿದ್ದಾರೆ.


Spread the love

Leave a Reply

Please enter your comment!
Please enter your name here