ಕಳ್ಳತನ ಮತ್ತು ಕೊಲೆ ಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಕಳ್ಳತನ ಮತ್ತು ಕೊಲೆ ಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು: ಕಳ್ಳತನ ಮತ್ತು ಕೊಲೆ ಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಕಳ್ಳತನ ಮತ್ತು ಕೊಲೆ ಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಹ್ಯಾರಿಸ್ @ಚಂದು ಹ್ಯಾರಿಸ್ ಎಂದು ಗುರುತಿಸಲಾಗಿದೆ.

ಈತನ ಮೇಲೆ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 19 ಪ್ರಕರಣಗಳು ದಾಖಲಾಗಿದ್ದು, ಈತ ಸುಮಾರು 1 ವರ್ಷಗಳಿಂದ ತಲೆಮರೆಸಿಕೊಂಡಿದ್ದನು. ಈತನ ಮೇಲೆ ಸುರತ್ಕಲ್ ಬರ್ಕೆ ಮಂಗಳೂರು ಉತ್ತರ, ಪಣಂಬೂರು ಪೊಲೀಸ್ ಠಾಣೆಗಳಲ್ಲಿ ವಾರಂಟ್ ಬಾಕಿ ಇದೆ.