ಕಾಂಗ್ರೆಸ್‌ನಿಂದ ಮಾತ್ರ ಅಭಿವೃದ್ಧಿ ಸಾಧ್ಯ: ಮೊದಿನ್ ಬಾವಾ

Spread the love

ಕಾಂಗ್ರೆಸ್‌ನಿಂದ ಮಾತ್ರ ಅಭಿವೃದ್ಧಿ ಸಾಧ್ಯ: ಮೊದಿನ್ ಬಾವಾ

ಮಂಗಳೂರು: ಕಾಂಗ್ರೆಸ್ ಸರಕಾರದ ಸಾಧನೆ ಮತ್ತು ಅಭಿವೃದ್ಧಿ ಕಾರ್ಯವನ್ನು ಕಾರ್ಯಕರ್ತರು ಮತದಾರರಿಗೆ ತಿಳಿ ಹೇಳುವ ಮೂಲಕ ಪಕ್ಷದತ್ತಾ ಒಲವು ತೋರಿಸಲು ವಾಹಕರಾಗಿ ಕೆಲಸ ಮಾಡ ಬೇಕು ಎಂದು ಶಾಸಕ ಮೊದಿನ್ ಬಾವಾ ಹೇಳಿದರು.

ಅವರು ಚೊಕ್ಕಬೆಟ್ಟುವಿನಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಡವರ ಕಲ್ಯಾಣಕ್ಕಾಗಿ ಉತ್ತಮ ಯೋಜನೆ ಜಾರಿ ಮಾಡಿದವರು. ಅನ್ನ ಭಾಗ್ಯ, ಕ್ಷೀರ ಭಾಗ್ಯ, ವಸತಿ ಮತ್ತಿತರ ಸೌಲಭ್ಯಗಳು ಬಡ ವರ್ಗಕ್ಕೆ ನೇರವಾಗಿ ತಲುಪುವ ಸೌಲಭ್ಯಗಳಾಗಿವೆ. ಸರ್ವರಿಗೂ ಉತ್ತಮ ರಸ್ತೆ, ಕುಡಿಯುವ ನೀರು ಮತ್ತಿತರ ಸೌಲಭ್ಯವನ್ನು ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದಲ್ಲಿ ಕಳೆದ ಐದು ವರ್ಷಗಳಲ್ಲಿ ಮಾಡಿದ್ದೇನೆ. ಮತದಾರರು ಮುಂದಿನ ಐದು ವರ್ಷದ ಅವಧಿಯಲ್ಲಿ ಮತ್ತಷ್ಟು ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡ ಬೇಕು ಎಂದರು.

ಹಂಗಾಮಿ ಅಧ್ಯಕ್ಷ ದೀಪಕ್ ಪೂಜಾರಿ, ಶಶಿಧರ್ ಹೆಗ್ಡೆ,ಹರಿನಾಥ್ ಸುರೇಂದ್ರ ಕಾಂಬ್ಳಿ, ಪುರುಷೋತ್ತಮ್ ಚಿತ್ರಾಪುರ,ಸದಾಶಿವ ಶೆಟ್ಟಿ,ಕವಿತಾ ಸನಿಲ್,ಪ್ರತಿಭಾ ಕುಳಾಯಿ, ಶಕುಂತಳಾ ಕಾಮತ್ ಮತ್ತಿತರರು ಉಪಸ್ಥಿತರಿದ್ದರು.


Spread the love