ಕಾಂಗ್ರೆಸ್ ನಾಯಕ ಐವನ್ ಡಿಸೋಜಾ ಮತ್ತು ಅವರ ಪತ್ನಿಗೆ ಕೊರೋನಾ ಪಾಸಿಟಿವ್ ದೃಢ

Spread the love

ಕಾಂಗ್ರೆಸ್ ನಾಯಕ ಐವನ್ ಡಿಸೋಜಾ ಮತ್ತು ಅವರ ಪತ್ನಿಗೆ ಕೊರೋನಾ ಪಾಸಿಟಿವ್ ದೃಢ

ಮಂಗಳೂರು: ಕಾಂಗ್ರೆಸ್ ನಾಯಕ ಮಾಜಿ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾರಿಗೆ ಶನಿವಾರ ಕೊರೋನಾ ಪಾಸಿಟಿವ್ ದೃಢಗೊಂಡಿದೆ.

ಶುಕ್ರವಾರ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರು ದಕ ಜಿಲ್ಲಾ ಪ್ರವಾಸ ಕೈಗೊಂಡಿದ್ದರು ಈ ವೇಳೆ ಐವಾನ್ ಡಿಸೋಜಾ ಅವರು ಪಕ್ಷದ ಸಭೆ, ಪತ್ರಿಕಾಗೋಷ್ಠಿ, ಹಾಗೂ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.

ಅಷ್ಟೇ ಅಲ್ಲದೆ ಶನಿವಾರ ಬೆಳಿಗ್ಗೆಯಷ್ಟೇ ಐವಾನ್ ಡಿಸೋಜಾ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹಾಗೂ ಮಾಜಿ ಸಚಿವ ಯು ಟಿ ಖಾದರ್ ಹಾಗೂ ಇತರರ ಜೊತೆ ಹಿರಿಯ ಕಾಂಗ್ರೆಸ್ ನಾಯಕ ವಿಜಯ್ ಕುಮಾರ್ ಶೆಟ್ಟಿಯವರನ್ನು ಕೂಡ ಭೇಟಿ ಮಾಡಿದ್ದರು. ಈ ನಡುವೆ ಐವಾನ್ ಡಿಸೋಜಾ ಹಾಗೂ ಅವರ ಪತ್ನಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ.


Spread the love