ಕಾಂಗ್ರೆಸ್ ನ ಪ್ರಭಾವಿ ಮುಖಂಡ, ಹಾಲಿ ರಾಜ್ಯ ಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ನಿಧನ

Spread the love

ಕಾಂಗ್ರೆಸ್ ನ ಪ್ರಭಾವಿ ಮುಖಂಡ, ಹಾಲಿ ರಾಜ್ಯ ಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ನಿಧನ

ಉಡುಪಿ:ಕಾಂಗ್ರೆಸ್ ನ ಪ್ರಭಾವಿ ಮುಖಂಡ, ಹಾಲಿ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ (80) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಅನಾರೋಗ್ಯ ಕಾರಣದಿಂದಾಗಿ ಕಳೆದ ಹಲವು ದಿನಗಳಿಂದ ಮಂಗಳೂರಿನ ಯೇನಪೊಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಸೋಮವಾರ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದರು. ಗಾಂಧಿ ಕುಟುಂಬದ ಆಪ್ತರಾಗಿದ್ದ ಆಸ್ಕರ್, ಕೇಂದ್ರ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ ಬ್ಲಾಸಂ ಫೆರ್ನಾಂಡಿಸ್, ಪುತ್ರ ಓಶಾನ್, ಪುತ್ರಿ ಓಶಾನಿ ಹಾಗೂ ಕುಟುಂಬಸ್ಥರು, ಅಪಾರ ಅಭಿಮಾನಿ ಬಳಗವನ್ನು ಅಗಲಿದ್ದಾರೆ.


Spread the love